ಗದಗ

ಆಯುಷ್ಯವೃದ್ಧಿಗೆ ಕ್ರೀಡೆ ಅವಶ್ಯ: ಯಾವಗಲ್

Published On :

ರೋಣ: ವ್ಯಕ್ತಿ ಲವಲವಿಕೆಯಿಂದರಲು ಹಾಗೂ ಆಯುಷ್ಯವೃದ್ಧಿಗೆ ಕ್ರೀಡೆ ಅತ್ಯಂತ ಮುಖ್ಯವಾಗಿದ್ದು, ಯುವಕರು ಸದಾ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕೆಂದು ನರಗುಂದ ಶಾಸಕ ಬಿ.ಆರ್. ಯಾವಗಲ್ ಹೇಳಿದರು.
ಅವರು ಈಚೆಗೆ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಸರ್ವೋದಯ ಪರಿವಾರ, ಗ್ರಾಮೀಣ ಹಾಗೂ ನಗರಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ರಾಜ್ಯ ಕೃಷಿ ಪಂಡಿತ ಪ್ರಶಸ್ತಿ ವಿಜೇತ ದಿ. ಪ್ರಕಾಶಪ್ಪ ದಾನರಡ್ಡಿ ಇವರ 2ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಜರುಗಿದ 12.5 ಕಿ.ಮೀ. ಗುಡ್ಡಗಾಡು ಓಟ (ಕ್ರಾಸ್ ಕಂಟ್ರಿ)ದ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಹೊರತುಪಡಿಸಿ ಉಳಿದೆಲ್ಲ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹ, ನೆರವು ಇಲ್ಲದೆ ಸೋರಗುತ್ತಿವೆ. ಅಂತಾರಾಷ್ಟ್ರೀಯಮಟ್ಟದಲ್ಲಿ ದೇಶ ಪದಕ ಗಳಿಕೆಯಲ್ಲಿ ಹಿಂದುಳಿದಿದೆ. ಆದ್ದರಿಂದ ವೈಯಕ್ತಿಕ, ಗುಂಪು ಆಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಸರಿಯಾದ ಪ್ರೋತ್ಸಾಹ, ನೆರವು ನೀಡಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ತಾಪಂ ಮಾಜಿ ಸದಸ್ಯ ಲಿಂಗರಾಜ ಪಾಟೀಲ ಮಾತನಾಡಿ, ಕೃಷಿ ಪ್ರಧಾನವಾದ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಕ್ರೀಡಾಸಕ್ತರಿದ್ದಾರೆ. ಮೊದಲು ಅಂಥ ಪ್ರತಿಭೆಗಳನ್ನು ಹುಡುಕುವ ಕಾರ್ಯವಾಗಬೇಕು ಎಂದರು.
ಸಾನ್ನಿಧ್ಯ ವಹಿಸಿದ್ದ ಗುಲಗಂಜಿ ಮಠದ ಗುರುಪಾದ ಶ್ರೀಗಳು ಮಾತನಾಡಿದರು. ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.
ಅಂತಾರಾಷ್ಟ್ರೀಯ ಕ್ರೀಡಾಪಟು ಬಸವರಾಜ ಇಂಗಳಗಿ, ಜಿಪಂ ಸದಸ್ಯ ಡಾ. ಆರ್.ಬಿ. ಬಸವರಡ್ಡೇರ, ತಾಪಂ ಉಪಾಧ್ಯಕ್ಷೆ ರುದ್ರವ್ವ ತಾಳಿ, ಗ್ರಾಪಂ ಅಧ್ಯಕ್ಷೆ ಚನ್ನಮ್ಮ ಯಂಡಿಗೇರಿ, ಎಂ.ಜಿ. ಅರಳಿ, ಶಂಕ್ರಪ್ಪ ಕಳ್ಳಿಗಣ್ಣವರ, ಅಶೋಕ ದಾನರಡ್ಡಿ,  ಸುರೇಶ ಅರಹುಣಸಿ, ಯಲ್ಲಪ್ಪಗೌಡ ಪಾಟೀಲ, ನೆಹರು ಕಂಬಳಿ, ರಾಮಣ್ಣ ಸಜ್ಜನರ, ಭರಮಪ್ಪ ಹುಗಾರ, ಸಿದ್ಧಪ್ಪ ಪಿಡಗಣ್ಣವರ ಮುಂತಾದವರು ಇದ್ದರು. ಗ್ರಾಪಂ ಮಾಜಿ ಅಧ್ಯಕ್ಷ ಅರ್ಜುನ     ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.