ಗದಗ

ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ವ್ಯಕ್ತಿ ಪತ್ತೆ

Published On :

ರೋಣ: ಓಮಿನಿ ವಾಹನವೊಂದರಲ್ಲಿ ವ್ಯಕ್ತಿಯೋರ್ವ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ಘಟನೆ ತಾಲೂಕಿನ ಹೊಸಳ್ಳಿ ಸಮೀಪದ ಹಳ್ಳದಲ್ಲಿ ಶುಕ್ರವಾರ ಬೆಳಗ್ಗೆ ಕಂಡು ಬಂದಿದೆ. ಘಟನೆಗೆ ಕಾರಣ ನಿಗೂಢವಾಗಿದ್ದು, ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.
ಹೊಸಳ್ಳಿ ಹಳ್ಳದ ಸೇತುವೆ ಬಳಿ ಓಮಿನಿ ವಾಹನದಲ್ಲಿ ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವ ವ್ಯಕ್ತಿಯನ್ನು ನೋಡಿದ ದಾರಿಹೋಕರು ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಬಳಿಕ ಅಂಬ್ಯುಲೆನ್ಸ್ ಮೂಲಕ ರೋಣ ಪಟ್ಟಣದ ಪಂಡಿತ ಡಾ. ಭೀಮಸೇನ ಜೋಶಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಎಸ್‌ಡಿಎಂಸಿ ಆಸ್ಪತ್ರೆಗೆ ಕಳುಹಿಸಲಾಯಿತು.  ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ರೋಣ ಪಟ್ಟಣದ ಮಲ್ಲೇಶ ಚನ್ನಪ್ಪಗೌಡ್ರ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ವಾನ ದಳ ಮತ್ತು ಬೆರಳಚ್ಚು ತಜ್ಞ ತಂಡ ಭೇಟಿ ನೀಡಿದೆ. ಡಿಎಸ್‌ಪಿ  ವಿ.ವಿ. ಕುಂಬಾರ, ರೋಣ ಸಿಪಿಐ ಮಲ್ಲನಗೌಡ ನಾಯ್ಕರ, ನರೇಗಲ್ ಪಿಎಸ್‌ಐ ಎಸ್.ಎನ್. ಅಂಬಿಗೇರ ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.