ಗದಗ

ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 13
ಕೇಂದ್ರದಲ್ಲಿರುವ ಯುಪಿಎ ಸರ್ಕಾರ ಆಹಾರ ಭದ್ರತೆ, ಬಡವರಿಗೆ ವಿಮೆ ಜಾರಿ, ಉದ್ಯೋಗಖಾತ್ರಿಯಂತಹ ಅನೇಕ ಮಹಾತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್‌ನ್ನು ಲೊಕಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವೀಕ್ಷಕ ಟಿ. ಜಾನ್ ಹೇಳಿದರು.
ಅವರು ಶುಕ್ರವಾರ ನಗರದ ಕಾಟನ್‌ಸೇಲ್ ಸೊಸೈಟಿ ಆವರಣದಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜರುಗಿದ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮುಖಂಡರ ಅಭಿಪ್ರಾಯ ಸಂಗ್ರಹಣೆಯ ನಂತರ ಜರುಗಿದ ಸಮಾರಂಭದಲ್ಲಿ ಮಾತನಾಡಿದರು.
ಕಾಂಗ್ರೆಸ್ ಬಡವರ, ದೀನ ದಲಿತರ, ದುರ್ಬಲರ, ಅಲ್ಪಸಂಖ್ಯಾತರ ಹಿತರಕ್ಷಣೆಯ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಿ ಸಮಾಜಿಕ ನ್ಯಾಯವನ್ನು ಒದಗಿಸಿದ ಪಕ್ಷವಾಗಿದ್ದು, ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಸಲ್ಲಿಸಿರುವ ಅಹವಾಲುಗಳನ್ನು ಶಿಘ್ರದಲ್ಲಿಯೇ ಕೆಪಿಸಿಸಿ ವರಿಷ್ಠರಿಗೆ ಸಲ್ಲಿಸಲಾಗುವುದು. ಆಂತರಿಕ ಭಿನ್ನಾಭಿಪ್ರಾಯವನ್ನು ಬದಿಗೊತ್ತಿ ಪಕ್ಷದ ಸಂಘಟನೆಗೆ ಹಾಗೂ ಬಲವರ್ಧನೆಗೆ ಎಲ್ಲರೂ ಕೆಲಸ ಮಾಡಬೇಕಿದೆ ಎಂದರು.
ಕೆಪಿಸಿಸಿಯಿಂದ ಗದಗ ಜಿಲ್ಲಾ ಉಸ್ತುವಾರಿಯಾಗಿ ನೇಮಕವಾಗಿರುವ ಎಲ್. ಹನುಮಂತಯ್ಯ ಮಾತನಾಡಿ, ರಾಜ್ಯದಲ್ಲಿ ಈ ಹಿಂದಿನ ಭ್ರಷ್ಟ ಬಿಜೆಪಿ ಸರ್ಕಾರವನ್ನು ಬದಿಗೊತ್ತಿ, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರನಾಳಿಕೆಯಲ್ಲಿ ನೀಡಿದ ಭರವಸೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಜನಪರವಾಗಿ, ಅಭಿವೃದ್ಧಿ ಪರ ಕಾರ್ಯಗಳನ್ನು ಮಾಡುತ್ತಿರುವ ಸಂಗತಿ ಕಾರ್ಯಕರ್ತರು ಜನತೆಗೆ ತಿಳಿಸಬೇಕಿದೆ ಎಂದರು.
ಹಾವೇರಿ ಲೋಕಸಭಾ ಕ್ಷೇತ್ರಕ್ಕೆ 15  ಆಕಾಂಕ್ಷಿಗಳು: ಟಿ. ಜಾನ್
ಗದಗ:  ಕಾಂಗ್ರೆಸ್ ಪಕ್ಷದಿಂದ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು 15 ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ ಎಂದು ಹಾವೇರಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ವೀಕ್ಷಕ ಟಿ. ಜಾನ್ ಹೇಳಿದರು. ನಗರದ ಕಾಟನ್‌ಸೆಲ್ ಸೊಸೈಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರದ ಸ್ಥಾನಗಳನ್ನು ಕಾಂಗ್ರೆಸ್ ತನ್ನ ವಶಕ್ಕೆ ತೆಗೆದುಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಎರಡು ದಿನಗಳಿಂದ ನಡೆದಿರುವ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಮುಖಂಡರ, ಕಾರ್ಯಕರ್ತರ ಸಭೆ ಈಗಾಗಲೇ ಜರುಗಿದ್ದು, ಹಾವೇರಿ ಹಾಗೂ ಗದಗ ಜಿಲ್ಲೆಯಲ್ಲಿ ಸದ್ಯ 15 ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದಾರೆ. ಗದಗನಿಂದ 5 ಆಕಾಂಕ್ಷಿಗಳಾಗಿದ್ದಾರೆ ಎಂದರು. ಪಕ್ಷದಲ್ಲಿ ಅಭ್ಯರ್ಥಿಯ ಇತಿಹಾಸ, ಅಭ್ಯರ್ಥಿ ಬಗ್ಗೆ ಜನರ ಅಭಿಪ್ರಾಯ, ಚಾರಿತ್ರ್ಯ ಎಲ್ಲವನ್ನೂ ಕೂಲಕುಂಶವಾಗಿ ಪರಿಶೀಲಿಸಿ, ಅಂತಿಮವಾಗಿ ಅಭ್ಯರ್ಥಿಗಳ ಹೆಸರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.