ಗುಣಮಟ್ಟದ ಶಿಕ್ಷಣ ನೀಡಿ: ಎಚ್ಕೆ
ಕನ್ನಡಪ್ರಭ ವಾರ್ತೆ, ಗದಗ, ಸೆ. 14
ಗುಣಮಟ್ಟದ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಉಪನ್ಯಾಸಕ ವೃಂದ ಪ್ರಾಮುಖ್ಯತೆ ನೀಡಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಶನಿವಾರ ನಗರದ ಕೆ.ಎಲ್.ಇ. ಶಿಕ್ಷಣ ಸಂಸ್ಥೆಯ ಜ. ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ನಿವೃತ್ತ ಪ್ರಾಚಾರ್ಯರಿಗೆ ಸನ್ಮಾನ, ಶೇ. 100ರಷ್ಟು ಫಲಿತಾಂಶ ತಂದ ಉಪನ್ಯಾಸಕರಿಗೆ ಸನ್ಮಾನ ಹಾಗೂ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಭಾಗ್ಯಕ್ಕಿಂತ ಮತ್ತೊಂದು ಸೇವೆ ಇಲ್ಲ. ಈ ನಿಟ್ಟಿನಲ್ಲಿ ಉಪನ್ಯಾಸಕರು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯ ಕನಸು ಕಾಣಬೇಕು. ಒಂದು ಸಮಾಜ ಹಾಗೂ ಜಾತಿಗೆ ಮಾತ್ರ ವಿದ್ಯೆ ಒಲಿಯುತ್ತದೆ ಎಂಬುದು ಬಹು ಹಿಂದಿನಿಂದ ಕೇಳಿಬರುತ್ತಿದ್ದ ಮಾತಾಗಿದೆ. ಆದರೆ ಎಲ್ಲ ವರ್ಗದ, ಎಲ್ಲ ಜನಾಂಗದವರು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಹುದ್ದೆಯನ್ನು ಅಲಂಕರಿಸುವುದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳು ಈ ಮಾತನ್ನು ಹುಸಿಗೊಳಿಸಿದ್ದಾರೆ.
ಸರ್ಕಾರಿ ಶಾಲೆ, ಕಾಲೇಜುಗಳ ಬಗ್ಗೆ ಬಹುತೇಕರು ಜನರಲ್ಲಿ ತಪ್ಪುಭಾವನೆಯಿದೆ. ಆದರೆ ಹತ್ತಾರು ವರ್ಷದಿಂದ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಬಹಳಷ್ಟು ಬದಲಾವಣೆಯನ್ನು ಕಂಡುಕೊಳ್ಳಲಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಮಾಡುವ ಮೂಲಕ ಉತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಫಲಿತಾಂಶ ವ್ಯವಸ್ಥೆ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಕಾರಿಯಾಗಿದ್ದು, ಈ ನಿಟ್ಟಿನಲ್ಲಿ ಪದವಿ ಪೂರ್ವ ಹಂತ ವಿದ್ಯಾರ್ಥಿ ಜೀವನದಲ್ಲಿ ಮಹತ್ವದ ಘಟ್ಟವಾಗಿದೆ. ವಿದ್ಯಾರ್ಥಿಗಳು ಶ್ರಮಪಟ್ಟು ಅಧ್ಯಯನ ಮಾಡಿದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಿ.ಎಚ್. ಗರಡಿಮನಿ ವಹಿಸಿದ್ದರು. ಜಿ.ಟಿ. ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಎಸ್. ಯಂಕಂಚಿ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಸ್. ಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಪ್ರಾಚಾರ್ಯ ಎಸ್.ಎಸ್. ವಡೆಯರ, ಸಿ.ಎಸ್. ಚನ್ನಪ್ಪಗೌಡರ, ರಾಯನಗೌಡರ ಅವರನ್ನು ಸನ್ಮಾನಿಸಲಾಯಿತು. 2011ರಿಂದ ವಿಷಯವಾರು ಫಲಿತಾಂಶದಲ್ಲಿ ಶೇ. 100ರಷ್ಟು ಫಲಿತಾಂಶಕ್ಕೆ ಕಾರಣರಾದ ಉಪನ್ಯಾಸಕರನ್ನು ಹಾಗೂ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಷಯದಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸಚಿವ ಎಚ್.ಕೆ. ಪಾಟೀಲ ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪ್ರಾ. ಎಂ.ಎಂ. ನರಗುಂದ, ಸಿ.ಎಂ. ಹುಲಗೂರ, ಗೂರಣ್ಣ ಬಳಗಾನೂರ, ಕೆ.ಬಿ. ತಳಗೇರಿ ಮುಂತಾದವರು ಉಪಸ್ಥಿತರಿದ್ದರು. ಪ್ರಾ. ಎಂ.ಸಿ. ಕಟ್ಟಿಮನಿ ಸ್ವಾಗತಿಸಿದರು. ಎಚ್.ಬಿ. ಯಲಬುರ್ಗಿ ನಿರೂಪಿಸಿದರು. ಎಸ್.ಎಸ್. ಪಾಟೀಲ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

