ಗದಗ

ಲಮಾಣಿ ಪುತ್ರನ ಸಾವಿಗೆ ಶೆಟ್ಟರ್ ಕಂಬನಿ

Published On :

ಲಕ್ಷ್ಮೇಶ್ವರ: ಶನಿವಾರ ರಾತ್ರಿ ಸಮೀಪದ ರಾಮಗೇರಿಯ ಹತ್ತಿರ ಬೊಲೇರೊ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರ ಪುತ್ರ ಚಂದ್ರಶೇಖರ ಲಮಾಣಿ ಮೃತಪಟ್ಟಿದ್ದು, ಶಾಸಕರ ಸ್ವ-ಗ್ರಾಮ ಕುಂದ್ರಳ್ಳಿಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭಾನುವಾರ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛವಿರಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.
ಈ ಸಂದರ್ಭ ದುಖಃತಪ್ತ ಮಾಜಿ ಶಾಸಕ ರಾಮಣ್ಣ ಲಮಾಣಿ ಜತೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಆ ಭಗವಂತ ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಈ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ. ಬೆಳೆಯುತ್ತಿರುವ ಯುವಕ ಹೀಗೆ ದುರಂತಕ್ಕೀಡಾಗಿದ್ದು ತುಂಬಾ ನೋವಿನ ಸಂಗತಿಯಾಗಿದೆ. ನಾವೆಲ್ಲ ನಿಮ್ಮ ಜತೆಯಲ್ಲಿದ್ದೇವೆ ಎಂದು ಸಾಂತ್ವನ ಹೇಳಿದರು.
ಅಂತ್ಯಕ್ರಿಯೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಮಾಜಿ ಸಚಿವ ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಕಳಕಪ್ಪ ಬಂಡಿ, ಮಾಜಿ ಸಂಸದ ಐ.ಜಿ. ಸನದಿ, ಶಾಸಕ ರಾಮಕೃಷ್ಣ ದೊಡ್ಡಮನಿ, ಕೃಷ್ಣಾ ನಾಯ್ಕ, ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ, ಜಿ.ಎಂ. ಮಹಾಂತಶೆಟ್ಟರ್, ಜಿ.ಎಸ್. ಗಡ್ಡದೇವರಮಠ, ಎಸ್.ಎನ್.ಪಾಟೀಲ, ಶಿವರಾಜ ಸಜ್ಜನ, ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ತಾಪಂ ಸದಸ್ಯ ತಿಮ್ಮರೆಡ್ಡಿ ಅಳವಂಡಿ, ಜಿಪಂ ಮಾಜಿ ಸದಸ್ಯ ದೀಪಕ್ ಲಮಾಣಿ, ಭೀಮಸಿಂಗ್ ರಾಠೋಡ, ಶಿವಪ್ರಕಾಶ ಮಹಾಜನಶೆಟ್ಟರ್, ಡಾ೤ ವೈ.ಎಫ್. ಹಂಜಿ, ಸೋಮಣ್ಣ ಮುಳಗುಂದ, ಚೆಂಬಣ್ಣ ಬಾಳಿಕಾಯಿ, ಆರ್.ಎಫ್. ಪುರಾಣಿಕಮಠ, ಮುಳಗುಂದ ಪಪಂ ಮಾಜಿ ಅಧ್ಯಕ್ಷ ಶೇಖಣ್ಣ ಬಡ್ನಿ, ಯು.ಎನ್. ಹೊಳಲಾಪುರ, ವೀರಣ್ಣ ಅಂಗಡಿ, ಎಂ.ಎಸ್. ಕರಿಗೌಡರ, ಶಿಗ್ಲಿ ಗ್ರಾಪಂ ಅಧ್ಯಕ್ಷ ದ್ಯಾಮಣ್ಣ ಹುನಗುಂದ, ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ, ತಾಪಂ ಮಾಜಿ ಸದಸ್ಯ ಸುಭಾಷ ಬಟಗುರ್ಕಿ ಸೇರಿ ಹಲವರು  ಮೃತರ ಆತ್ಮಕ್ಕೆ ಶಾಂತಿ ಕೋರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.