ಗದಗ

ಮಹಿಳೆಯರ ಮೇಲೆ ದೌರ್ಜನ್ಯ: ಪ್ರತಿಭಟನೆ

Published On :

ಗದಗ: ದೇಶಾದ್ಯಂತ ದಿನೇ ದಿನೇ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯದಂತಹ ಪ್ರಕರಣಗಳು ನಡೆಯುತ್ತಿದ್ದು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸೋಮವಾರ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ ಉಗಲಾಟ ಮಾತನಾಡಿ, ಇಂಥ ಪ್ರಕರಣಗಳು ಪದೇ ಪದೇ ನಡೆಯುತ್ತಿರುವುದರಿಂದ ಮಹಿಳೆಯರು ನೆಮ್ಮದಿಯ ಜೀವನ ಕಳೆಯುವುದು ದುಸ್ತರವಾಗುತ್ತಿದೆ. ಮುಖ್ಯವಾಗಿ ಒಂಟಿ ಮಹಿಳೆಯರು ಸಂಚರಿಸುವುದೇ ದುಸ್ತರವಾಗುತ್ತಿದೆ. ಕಳೆದ ಡಿಸೆಂಬರ್‌ನಲ್ಲಿ ದೆಹಲಿಯಲ್ಲಿ ನಡೆದ ಘಟನೆಯಂತೂ ನಾಗರಿಕ ಸಮಾಜ ತಲೆ ತಗ್ಗಿಸುವಂತಹದ್ದಾಗಿದೆ. ಮುಂಬೈನ ಶಕ್ತಿ ಮಿಲ್ಸ್‌ನಲ್ಲಿ ಪತ್ರಕರ್ತೆಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ. ಈ ಹಿಂದೆಯೂ ಶಕ್ತಿ ಮಿಲ್ಸ್ ಆವರಣದಲ್ಲಿಯೇ 10 ಇಂಥ ಪ್ರಕರಣಗಳು ನಡೆದಿವೆ ಎನ್ನುವುದನ್ನ ದಾಖಲೆಗಳು ಹೇಳುತ್ತಿವೆ. ಇದೇ ರೀತಿ ಬೆಂಗಳೂರಿನಲ್ಲಿ ನೇಪಾಳ ಮೂಲಕ ಕಾನೂನು ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣ, ಉಡುಪಿಯ ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಪ್ರಕರಣ, ಹಾಗೂ ರಾಜ್ಯದಲ್ಲಿ ದಿನೇ ದಿನೆ ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿವೆ. ದೇಶದಲ್ಲಿ ಒಂದು ವರ್ಷದ ಅವಧಿಯಲ್ಲಿ 30,942 ಇಂಥ ಪ್ರಕರಣಗಳು ನಡೆದಿವೆ. ದೆಹಲಿಯಲ್ಲಿಯೇ 3 ತಿಂಗಳಲ್ಲಿ 393 ಪ್ರಕರಣಗಳು ನಡೆದಿವೆ. ರಾಜ್ಯದಲ್ಲಿಯೂ 6 ತಿಂಗಳಲ್ಲಿ 475 ಪ್ರಕರಣಗಳು ವರದಿಯಾಗಿದ್ದು, ಇದು ನಮ್ಮ ಸರ್ಕಾರಗಳ ಆಡಳಿತ ವೈಖರಿಗೆ ಹಿಡಿದ ಕನ್ನಡಿಯಾಗಿದೆ ಎಂದು ಟೀಕಿಸಿದರು.
ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯದಂತಹ ಘಟನೆಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಕಠಿಣ ಕ್ರಮ ಜಾರಿಗೊಳಿಸಬೇಕು. ಮಹಿಳಾ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ತಾರ್ಕಿಕ ಮತ್ತು ತ್ವರಿತ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಗಳ ರಚನೆ, ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ವಿಧಿಸಲು ದೇಶದ ಕಾನೂನಿಗೆ ವಿಶೇಷ ತಿದ್ದುಪಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಣೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನೇಮಕಾತಿ ವಿಶೇಷವಾಗಿ ಮಹಿಳಾ ಸಿಬ್ಬಂದಿಯ ನಿಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವಂದನಾ ವೆರ್ಣೇಕರ, ರೇಣುಕಾ ಆಸಂಗಿ, ಅಕ್ಕಮ್ಮ ಹೊಟ್ಟೀನ, ದೇವಕ್ಕ ಉಪ್ಪೀನ, ಅನಸೂಯಾ ಹಿರೇಮಠ, ಕವಿತಾ ಹರ್ಲಕುರ್ಕಿ, ಸುಮತಿ ಹುಯಿಲಗೋಳ, ಕಮಲಾಕ್ಷಿ ಗೊಂದಿ, ಪುಷ್ಪಾ ಮಾಡಲಗೇರಿ, ಶಿವಲೀಲಾ ಅಂಗಡಿ, ವಿಜಯಲಕ್ಷ್ಮಿ ಹಂಗರಕಿ, ಅಶ್ವಿನಿ ಜಗತಾಪ, ಶಾರದಾ ಸಜ್ಜನರ, ಗಂಗಮ್ಮ ಬೂದಿಹಾಳ, ರೇಣುಕಾ ಬೆಳವಟಗಿ, ಗಿರಜಾ ಬೆಣಕಲ್ಲ, ಚನ್ನಬಸಮ್ಮ ನಾಗೂರ, ರೇಣುಕಾ ಹುಣಶಿಕಟ್ಟಿ, ಕಮಲವ್ವ ಕಡಿವಾಲ, ದೇವಕ್ಕ ಮೇಟಿ, ಪಾರವ್ವ ಮುನೇನಕೊಪ್ಪ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.