ಗದಗ

ಹಮ್ಮಿಗಿ ಜಿಪಂ ಉಪಚುನಾವಣೆ: ಹೇಮಗಿರೀಶ ಹಾವಿನಾಳ ನಾಮಪತ್ರ ಸಲ್ಲಿಕೆ

Published On :

ಮುಂಡರಗಿ:  ಈ ಹಿಂದೆ ಹಮ್ಮಿಗಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಆಯ್ಕೆಯಾಗಿ 2 ವರ್ಷ 3 ತಿಂಗಳು ಪ್ರಾಮಾಣಿಕ ಸೇವೆ ಮಾಡಿದ್ದೆ, ಕೆಲ ಅನಿವಾರ್ಯ ಕಾರಣಗಳಿಂದ ಪಕ್ಷ ತ್ಯಜಿಸಿದ್ದು, ಈಗ ಬಿಜೆಪಿ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸುತ್ತಿದ್ದು ಜನತೆ ನನ್ನನ್ನು ಕೈ ಬಿಡುವುದಿಲ್ಲ ಎನ್ನುವ ವಿಶ್ವಾಸ ನನ್ನದಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಹೇಳಿದರು.  ಅವರು ಬುಧವಾರ ಹಮ್ಮಿಗಿ ಜಿಪಂ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ನಂತರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ನಾನು ಸದಸ್ಯನಾಗಿರುವಷ್ಟು ಅವಧಿಯಲ್ಲಿ ಈ ಭಾಗದ ರಸ್ತೆ, ಕುಡಿವ ನೀರು, ಸಮುದಾಯ ಭವನ, ಶಾಲೆಗಳ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯ ಮಾಡಿರುವೆ. ಅದಕ್ಕಾಗಿ ಮತದಾರರು ನನ್ನನ್ನು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಮಾಜಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ, ರಂಗಪ್ಪ ಕ್ಯಾದಿಗಿಹಳ್ಳಿ, ಶಿವಪ್ಪ ಅಂಕದ, ಬೀರಪ್ಪ ಬಂಡಿ ಸೇರಿದಂತೆ ಅನೇಕರು ಮಾತನಾಡಿದರು. ಸತಾರಾಮರಾಜು, ಎಸ್.ವಿ. ಪಾಟೀಲ, ರಜನೀಕಾಂತ ದೇಸಾಯಿ, ಮುದ್ಲಿಂಗಪ್ಪ ಕೊರ್ಲಹಳ್ಳಿ, ಬಸವರಾಜ ಮುಂಡವಾಡ, ಗುಡದಪ್ಪ ದೇಸಾಯಿ, ಕರಿಯಪ್ಪ ಹಡಗಲಿ, ಮಲ್ಲಿಕಾರ್ಜುನ ಬಹದ್ದೂರ ದೇಸಾಯಿ, ಈರಣ್ಣ ಭಜಂತ್ರಿ, ದೊಡ್ಡನಿಂಗಪ್ಪ ಮಡೇಹೊಲದ, ರಮೇಶ ಹುಳಕಣ್ಣವರ, ಸೋಮನಗೌಡ ಪಾಟೀಲ, ಶ್ರೀಕಾಂತಗೌಡ ಪಾಟೀಲ, ನೀಲಪ್ಪ ನಂದಗಾವಿ ಸೇರಿದಂತೆ ಅನೇಕರು ಇದ್ದರು. ರಮೇಶ ಹುಳಕಣ್ಣವರ ನಿರೂಪಸಿದರು. ಕಾರ್ಯದರ್ಶಿ ಬಸವರಾಜ ಸಸಿಮಠ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.