ಮೂಲ ಸೌಲಭ್ಯಕ್ಕೆ ಆಗ್ರಹ: ಮನವಿ
ಲಕ್ಷ್ಮೇಶ್ವರ: ಪಟ್ಟಣದ ಜಿ.ಎಸ್. ಗಡ್ಡದೇವರಮಠ ನಗರಕ್ಕೆ ವಿದ್ಯುತ್ ವ್ಯವಸ್ಥೆ ಹಾಗೂ ಕುಡಿವ ನೀರನ್ನು ಪೂರೈಸಬೇಕು ಎಂದು ಅಲ್ಲಿನ ನಿವಾಸಿಗಳು ಪುರಸಭೆಯ ಅಧ್ಯಕ್ಷರಿಗೆ ಹಾಗೂ ಮುಖ್ಯಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಸವರಾಜ ದೊಡ್ಡಮನಿ ಮಾತನಾಡಿ, ಪಟ್ಟಣದ ಹೊರ ವಲಯದಲ್ಲಿನ ಜಿ.ಎಸ್. ಗಡ್ಡದೇವರಮಠ ನಗರವು ಮೂಲ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದ್ದು, ವಿಸ್ತರಣೆಯಾಗುತ್ತಿರುವ ಇಂಥ ಪ್ರದೇಶಗಳಲ್ಲಿ ಹಾವು, ಚೇಳುಗಳ ಕಾಟ ವಿಪರೀತವಾಗಿದ್ದು, ಅದಕ್ಕಾಗಿ ಬೀದಿ ದೀಪಗಳ ವ್ಯವಸ್ಥೆ ಮಾಡಬೇಕು. ವಿದ್ಯುತ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಾಕಷ್ಟು ತೊಂದರೆಯಾಗುತ್ತಿದೆ. ಈ ನಗರಕ್ಕೆ ಇದುವರೆಗೂ ಕುಡಿಯುವ ನೀರು ಲಭ್ಯವಾಗಿಲ್ಲ. ಹೀಗಾಗಿ ಅಕ್ಕ ಪಕ್ಕದ ಹೊಲಗಳ ಬೋರ್ ವೆಲ್ಲ್ಗಳಿಂದ ನೀರನ್ನು ತರಬೇಕಾಗಿದೆ. ಇದರಿಂದ ಮಹಿಳೆಯರು ಮತ್ತು ಮಕ್ಕಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಅದಕ್ಕಾಗಿ ಶೀಘ್ರವಾಗಿ ಮೂಲ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪುರಸಭೆ ಅಧ್ಯಕ್ಷೆ ಗಂಗಮ್ಮ ಫಕ್ಕಿರಸ್ವಾಮಿಮಠ ಮಾತನಾಡಿ, ಗಡ್ಡದೇವರಮಠ ನಗರಕ್ಕೆ ಅವಶ್ಯವಾಗಿ ಬೇಕಾಗಿರುವ ವಿದ್ಯುತ್ ಹಾಗೂ ಕುಡಿಯುವ ನೀರನ್ನು ಒದಗಿಸಿಕೊಡಲು ಕೂಡಲೇ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಉಪಾಧ್ಯಕ್ಷ ಎಂ.ಆರ್. ಪಾಟೀಲ, ಮುಖ್ಯಾಧಿಕಾರಿ ವಿ.ಬಿ. ಬೂದಿಹಾಳ, ಗಡ್ಡದೇವರಮಠ ನಗರ ನಿವಾಸಿಗಳಾದ ದಾದಾಪೀರ್ ಕಮಡೊಳ್ಳಿ, ಮಹಾಂತೇಶ ಬಾರ್ಕಿ, ಬಸವಂತಪ್ಪ ಕೊಳೂರ, ರಾಮನಗೌಡ ಮುದೇನೂರ, ಮೈಲಾರಪ್ಪ ಬಾರಕೇರ, ದಸ್ತಗೀರಸಾಬ ರೊಕ್ಕದಕಟ್ಟಿ, ಇಮಾಮಸಾಬ ಚೆಂಗಾಪುರ, ರವಿ ಹಂಜಗಿ, ರಾಜೇಸಾಬ ರಿತ್ತಿ, ರಮೇಶ ನಾಡಿಗೇರ, ಶಬ್ಬೀರ ಕುದುರಿ, ರತ್ನವ್ವ ಬಳಗಾನೂರ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

