ರೇಲ್ವೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೇಂದ್ರಕ್ಕೆ ನಿಯೋಗ
ಕನ್ನಡಪ್ರಭ ವಾರ್ತೆ, ಗದಗ, ಸೆ. 19
ಗದಗ ಭಾಗದ ರೇಲ್ವೆ ಬೇಡಿಕೆಗಳ ಕುರಿತು ಗಮನ ಸೆಳೆಯುವ ನಿಟ್ಟಿನಲ್ಲಿ ಅಕ್ಟೋಬರ್ ಮೊದಲ ವಾರದಲ್ಲಿ ರೇಲ್ವೆ ಸಚಿವರ ಬಳಿ ನಿಯೋಗ ತೆರಳುವುದಾಗಿ ರಾಜ್ಯ ರೇಲ್ವೆ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ನಿಸ್ಸಾರ ಅಹ್ಮದ ಖಾಜಿ ಹೇಳಿದರು.
ಅವರು ಗುರುವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 4 ವರ್ಷಗಳ ಹಿಂದೆ ಈ ಭಾಗದಲ್ಲಿ ಬ್ರಾಡ್ಗೇಜ್ ವ್ಯವಸ್ಥೆ ಕಲ್ಪಿಸಲಾಗಿದ್ದರೂ ರೇಲ್ವೆ ಸೌಕರ್ಯ ನಿರೀಕ್ಷಿತ ಮಟ್ಟದಲ್ಲಿ ದೊರೆಯದೆ ಸತತವಾಗಿ ಈ ಭಾಗ ನಿರ್ಲಕ್ಷಿಸಲ್ಪಟ್ಟಿದೆ. ನೆರೆಯ ರಾಜ್ಯಗಳ ಹುನ್ನಾರ ಗದಗ ಭಾಗದ ರೇಲ್ವೆ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಿದ್ದು, ಕೈಗಾರಿಕಾ ಉದ್ಯಮಗಳಿಗೆ ಉತ್ತೇಜನ ದೊರೆಯದೇ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆ ಕುಂಠಿತಕ್ಕೆ ಕಾರಣವಾಗಿದೆ. ಸದ್ಯ ಗದಗ-ಸೊಲ್ಲಾಪುರ ಜೋಡಿ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರದ ರೇಲ್ವೆ ಇಲಾಖೆ ಆದ್ಯತೆ ನೀಡಿರುವುದನ್ನು ಹೋರಾಟ ಸಮಿತಿ ಸ್ವಾಗತಿಸುತ್ತದೆ. ಇನ್ನಿತರ ಬೇಡಿಕೆಗಳಾದ ಗದಗ-ವಾಡಿ ನೂತನ ರೈಲು ಮಾರ್ಗದ ಕಾಮಗಾರಿ ಶೀಘ್ರ ಪ್ರಾರಂಭಿಸುವಂತೆ, ಗದಗ-ಹಾವೇರಿ ನೂತನ ರೈಲು ಮಾರ್ಗ, ಗದಗ-ಮುಂಡರಗಿ-ಹರಿಹರ ರೇಲ್ವೆ ಮಾರ್ಗ ಅನುಷ್ಠಾನಗೊಳಿಸುವಂತೆ ಹಾಗೂ ಗದಗ ರೇಲ್ವೆ ನಿಲ್ದಾಣವನ್ನು ವಿಶ್ವದರ್ಜೆ ನಿಲ್ದಾಣವನ್ನಾಗಿ ಪರಿವರ್ತಿಸುವುದು, ನಗರದಿಂದ ಸೊಲ್ಲಾಪುರ, ಗುಂತಕಲ್, ಮೀರಜ ನಗರಗಳಿಗೆ ಪ್ಯಾಸೆಂಜರ್ ರೈಲು ಸೇವೆ. ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್, ಗೋವಾದಂತಹ ಪ್ರಮುಖ ನಗರಗಳಿಗೆ ರೈಲು ಸೌಕರ್ಯ, ವಿದ್ಯುತ್ ರೈಲು ಸಂಪರ್ಕ ಕಲ್ಪಿಸುವಂತೆ ಹಾಗೂ ನಗರದಿಂದ ಸಂಚರಿಸುವ ರೈಲು ಒಂದಕ್ಕೆ ಲಿಂ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಹೆಸರನ್ನು ನಾಮಕರಣಗೊಳಿಸುಂತೆ ಆಗ್ರಹಿಸಿ ಸ್ಥಳೀಯ ಜನಪ್ರತಿನಿದಿಗಳೊಂದಿಗೆ ಕೇಂದ್ರ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಬಳಿ ನಿಯೋಗ ತೆರಳಿ ಒತ್ತಾಯಿಸುವುದಾಗಿ ತಿಳಿಸಿದರು.
ಸಮಿತಿ ಉಪಾಧ್ಯಕ್ಷ ವಿಜಯ ಮುಳಗುಂದ, ಕಾರ್ಯದರ್ಶಿ ಬಸವಣ್ಣಯ್ಯ ಹಿರೇಮಠ, ಎನ್.ಕೆ. ಕೊರ್ಲಹಳ್ಳಿ, ಸಿ.ಜಿ.ಬಿ. ಹಿರೇಮಠ, ಮಹೇಶ ಕರಿಬಿಷ್ಟಿ ಮುಂತಾದವರು ಸುದ್ದಿಗೋಷ್ಠಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

