ಗದಗ

27ರಿಂದ ಸಂಗೀತ ವಿದ್ವಾಂಸರ ಸಮ್ಮೇಳನ

Published On :

ಗದಗ:  ಸೆ. 27 ರಿಂದ ಅಕ್ಟೋಬರ್ 2 ರವರೆಗೆ ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಕರ್ನಾಟಕ ಗಾನಕಲಾ ಪರಿಷತ್ತು, ರಾಮಕೃಷ್ಣ ಆಶ್ರಮ ಗದಗ, ಕೆ.ಎಚ್. ಪಾಟೀಲ ಪ್ರತಿಷ್ಠಾನ ಗದಗ ಇವರ ಆಶ್ರಯದಲ್ಲಿ 44ನೇ ಹಿರಿಯ ಸಂಗೀತ ವಿದ್ವಾಂಸರ ಹಾಗೂ 26ನೇ ಯುವ ಸಂಗೀತ ವಿದ್ವಾಂಸರ ರಾಜ್ಯಮಟ್ಟದ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ನಾಡಿನ ಹಿರಿಯ ಸಂಗೀತ ವಿದ್ವಾಂಸ ಆರ್.ಕೆ. ಪದ್ಮನಾಭ ಹೇಳಿದರು. ಅವರು ಮಂಗಳವಾರ ಸಂಜೆ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸೆ. 27 ರಂದು ನಡೆಯುವ ಉದ್ಘಾಟನೆ ಸಮಾರಂಭದ ಸಾನ್ನಿಧ್ಯವನ್ನು ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧಲಿಂಗ ಶ್ರೀಗಳು, ಗದಗ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ, ತುಮಕೂರು ರಾಮಕೃಷ್ಣ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ ವಹಿಸುವರು. ಸಮ್ಮೇಳನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು. ಅಕ್ಟೋಬರ್ 2 ರಂದು ಸಮಾರೋಪ ಸಮಾರಂಭ ಜರುಗಲಿದ್ದು, ತ್ಯಾಗರಾಜ ಸ್ವಾಮಿಗಳು ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ನಡೆಯಲಿದ್ದು, ಇದರಲ್ಲಿ 300 ಸಂಗೀತ ಕಲಾವಿದರು ಒಟ್ಟಿಗೆ ಪಾಲ್ಗೊಳ್ಳುವುದು ವಿಶೇಷವಾಗಿದೆ. ಇದರೊಟ್ಟಿಗೆ ಹಿಂದೂಸ್ತಾನಿ ಹಾಗೂ ಕರ್ನಾಟಕ ಸಂಗೀತ ಸೇರಿದಂತೆ ನಾಡಿನ ಹಿರಿಯ, ಕಿರಿಯ 10 ಕಲಾವಿದರಿಗೆ ಸನ್ಮಾನ ಒಂದೇ ವೇದಿಕೆಯಲ್ಲಿ ಜರುಗಲಿದೆ. ಗದಗ ರಾಮಕೃಷ್ಣ ಆಶ್ರಮದ ನಿರ್ಭಯಾನಂದ ಸರಸ್ವತಿ ಸ್ವಾಮಿಗಳು ಸಾನ್ನಿಧ್ಯ ವಹಿಸುವರು.
44ನೇ ಹಿರಿಯ ಸಂಗೀತ ವಿದ್ವಾಂಸರ ಸಮ್ಮೇಳನಾಧ್ಯಕ್ಷರಾದ ಡಾ. ಎಚ್.ಎಸ್. ಅನಸೂಯಾ ಕುಲಕರ್ಣಿ ಅವರಿಗೆ ಗಾನ ಕಲಾಭೂಷಣ ಬಿರುದು ಪ್ರದಾನ ಹಾಗೂ ಸನ್ಮಾನ, 26ನೇ ಯುವ ಸಂಗೀತ ವಿದ್ವಾಂಸರ ಸಮ್ಮೇಳನಾಧ್ಯಕ್ಷರಾದ ಎಲ್.ವಿ. ಮುಕುಂದ್ ಅವರಿಗೆ ಗಾನ ಕಲಾಶ್ರೀ ಬಿರುದು ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಸೆ. 27 ರಿಂದ ಅ. 2 ರವರೆಗೆ ನಿರಂತರ ಸಂಗೀತ ಕಾರ್ಯಕ್ರಮಗಳು ನಾಡಿನ ಪ್ರಖ್ಯಾತ ಸಂಗೀತ ವಿದ್ವಾಂಸರಿಂದ ಜರುಗಲಿವೆ ಎಂದರು. ಮಾಜಿ ಶಾಸಕ ಡಿ.ಆರ್. ಪಾಟೀಲ, ಡಾ. ಜಿ.ಬಿ. ಪಾಟೀಲ, ಕೆ.ಬಿ. ತಳಗೇರಿ, ಸಿದ್ದು ಯಾಪಲಪರವಿ, ಗುರಣ್ಣ ಬಳಗಾನೂರ, ಜಿ.ಕೆ. ಜಮಾದಾರ ಮುಂತಾದವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.