ಗದಗ

ಕವಿವಿ ಬ್ಲ್ಯೂ ಆಗಿ ಆಯ್ಕೆ

Published On :

ಗದಗ: ಎಚ್.ಇ.ಎಸ್. ಪದವಿ ಮಹಾವಿದ್ಯಾಲಯದಲ್ಲಿ ಈಚೆಗೆ ಕವಿವಿಮಟ್ಟದ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಸ್ಥಳೀಯ ಬಸವೇಶ್ವರ ಕಾಲೇಜಿನ ವಿದ್ಯಾರ್ಥಿ ಶಿವರಾಜ ಮಲ್ಲಿಗವಾಡ ಭಾಗವಹಿಸಿ ಒಂದು ಕಿಲೋಮೀಟರ್ ರೋಡ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 50 ಕಿಮೀ ಎಂ.ಎಸ್. ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಕವಿವಿ ಬ್ಲ್ಯೂ ಆಗಿ ಆಯ್ಕೆಯಾಗಿದ್ದಾನೆ. ಈ ವಿದ್ಯಾರ್ಥಿಗೆ ಜ. ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟರ್, ಪ್ರಾ. ಬಿ.ಬಿ. ಗೌಡರ, ಕ್ರೀಡಾ ಸಂಘದ ಕಾರ್ಯಾಧ್ಯಕ್ಷ ಪ್ರೊ. ಸಿ.ಎಂ. ಕಾಳನ್ನವರ, ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಸ್ಥಾನಿಕ ಮಂಡಳಿಯ ಚೇರ್‌ಮನ್, ಸ್ಥಾನಿಕ ಮಂಡಳಿಯ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ವಿದ್ಯುತ್ ನಿಲುಗಡೆ
ಗದಗ:  110 ಕೆವಿ ಲಕ್ಷ್ಮೇಶ್ವರ, ಮುಂಡರಗಿ, ಡಂಬಳ ಹಾಗೂ 33 ಕೆವಿ ಸಿಂಗಟಾಲೂರು ಉಪವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ ಸೆ. 21ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಲಕ್ಷ್ಮೇಶ್ವರ, ಮುಂಡರಗಿ, ಡಂಬಳ ಹಾಗೂ ಸಿಂಗಟಾಲೂರ ಉಪಕೇಂದ್ರದಿಂದ ಪೂರೈಕೆಯಾಗುತ್ತಿರುವ ಎಲ್ಲ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಕಾರಣ ಸಾರ್ವಜನಿಕರು ಪ್ರಕಟಣೆ ಗಮನಿಸಿ ಸಹಕರಿಸುವಂತೆ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಪೂರ್ವಭಾವಿ ಸಭೆ
ಗದಗ: ಬೆಟಗೇರಿ ಸಾರ್ವಜನಿಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಅ. 2 ರಂದು ಮಹಾತ್ಮಾ ಗಾಂಧೀಜಿ , ಲಾಲಬಹಾದ್ದೂರ ಶಾಸ್ತ್ರಿಯವರ ಜಯಂತಿ ಹಾಗೂ ರಾಜ್ಯೋತ್ಸವ ಆಚರಿಸುವ ಕುರಿತು ಬೆಟಗೇರಿ ಸಾರ್ವಜನಿಕರ ಹಾಗೂ ಇಲ್ಲಿಯ ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರ, ಸಭೆಯನ್ನು ಸೆ. 21ರ ಬೆಳಗ್ಗೆ 9.30 ಗಂಟೆಗೆ ಬೆಟಗೇರಿಯ ಬಾಸೆಲ್ ಮಿಶನ್ ಪ್ರೌಢಶಾಲೆಯಲ್ಲಿ ಕರೆಯಲಾಗಿದೆ ಎಂದು ಗಣೇಶಸಿಂಗ್ ಬ್ಯಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪಘಾತ: ಓರ್ವನ ಸಾವು
ಲಕ್ಷ್ಮೇಶ್ವರ:  ಸಮೀಪದ ಗೊಜನೂರ ಗ್ರಾಮದ ಬಳಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.  ಬೆಟಗೇರಿ ಡಿಪೋಗೆ ಸೇರಿದ ಬಸ್ ಹಾವೇರಿಯಿಂದ ಲಕ್ಷ್ಮೇಶ್ವರ ಮಾರ್ಗವಾಗಿ ಗದುಗಿಗೆ ಹೋಗುತ್ತಿದ್ದ ವೇಳೆಯಲ್ಲಿ ಎದುರುಗಡೆ ಬರುತ್ತಿದ್ದ ಕಾರಿಗೆ ಮುಖಾ ಮುಖಿ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಸಿದ್ಧನಗೌಡ ಮುಲ್ಕಿಪಾಟೀಲ (62) ಎಂಬುವವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಕಾರು ಚಲಾಯಿಸುತ್ತಿದ್ದ ಪ್ರಕಾಶ ಸಿದ್ಧನಗೌಡ ಕೊಣ್ಣೂರ ತೀವ್ರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಡಿಕ್ಕಿ ಸಂಭವಿಸಿದ ನಂತರ ಬಸ್ ಕಂದಕಕ್ಕೆ ಉರುಳಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.