ಎಸ್ಸೆಸ್ಸೆಲ್ಸಿಯಲ್ಲಿ ಪಬ್ಲಿಕ್ ಪರೀಕ್ಷೆ ಅವಶ್ಯ: ನಾಯಕ
ಕನ್ನಡಪ್ರಭ ವಾರ್ತೆ, ಗದಗ, ಸೆ. 21
ಇಲಾಖೆಯ ನಿಯಮಾವಳಿಗಳಲ್ಲಿ ಪರಿವರ್ತನೆಗಳಾಗುವುದು ಸಹಜ. ಆದರೂ ಮಕ್ಕಳ ಮಾನಸಿಕ, ಬೌದ್ಧಿಕ ಮಟ್ಟ ಅಳತೆ ಮಾಡಲು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ಅವಶ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜೀವ್ ನಾಯಕ್ ಹೇಳಿದರು.
ಅವರು ಈಚೆಗೆ ನಗರದ ಬಸವೇಶ್ವರ ಪ್ರೌಢಶಾಲೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ಬೆಂಗಳೂರು, ಜಿಪಂ ಗದಗ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ ಗದಗ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಹರ ಹಾಗೂ ಗ್ರಾಮೀಣ ವಲಯ, ಮತ್ತು ಬಸವೇಶ್ವರ ಪ್ರೌಢಶಾಲೆ ಗದಗ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿರುವ ಜಿಲ್ಲಾಮಟ್ಟದ ಪ್ರಶ್ನೆ ಪತ್ರಿಕೆ, 2 ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಿಸಿಇ ಮೌಲ್ಯಮಾಪನದ ಪದ್ಧತಿಯನ್ನು ಎಲ್ಲ ಶಿಕ್ಷಕರು ಪ್ರಾಮಾಣಿಕವಾಗಿ ವರ್ಗ ಕೋಣೆಯಲ್ಲಿ ಅನುಷ್ಠಾನ ಮಾಡಿ, ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವಂತೆ ಕರೆ ನೀಡಿದರು. ಗದಗ ಶಹರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ ಮಾತನಾಡಿ, ಶಿಕ್ಷಕರು ಈ ತರಬೇತಿ ಪಡೆದು ಸಂಪನ್ಮೂಲ ವ್ಯಕ್ತಿಗಳಾಗಿ ತಮ್ಮ ಶಾಲೆಯ ಎಲ್ಲ ಸಹ-ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ನೀಡಲು ತಿಳಿಸಿದರು. ಅಲ್ಲದೆ ಇಲಾಖೆಯ ಪ್ರತಿಯೊಂದು ಚಟುವಟಿಕೆಯಲ್ಲಿ ತಮ್ಮ ವಯಕ್ತಿಕ ವಿಚಾರಗಳನ್ನು ವ್ಯಕ್ತಪಡಿಸಿ, ಮುಕ್ತವಾಗಿ ಚರ್ಚಿಸಿ ಇಲಾಖೆಯ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ವಿನಂತಿಸಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯಿಂದ ಸಂಪನ್ಮೂಲ ವ್ಯಕ್ತಿ ಮಹೇಶ ಪಾಟೀಲ, ಚೆನ್ನೆಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್. ಗುಡ್ಲಾನೂರ, ಯುವರಾಜ ನಾಯಕ, ಐ.ಆರ್. ಅಕ್ಕಿ, ನಿವೃತ್ತ ಶಿಕ್ಷಕ ಎಸ್.ಟಿ. ಬ್ಯಾಕೋಡ. ಎ.ಎ. ಖಾಜಿ, ಜಿ.ಡಿ. ದಾಸರ. ಎಚ್.ಎ. ಫಾರುಕೆ, ಜಿಲ್ಲಾ ಶಿಕ್ಷಣ ಸಂಯೋಜಕ ಸಿ.ಬಿ. ಕಾಳೆ, ಆರ್.ಎಸ್. ತ್ರಿಮಲ್ಲೆ, ಎಸ್.ಬಿ. ಗೌಡರ ಭಾಗವಹಿಸಿದ್ದರು. ಎ.ಎ. ಖಾಜಿ ಸ್ವಾಗತಿಸಿದರು. ಜಿ.ಡಿ. ದಾಸರ ವಂದಿಸಿದರು. ಕೆ.ವಿ. ಕೋರಡ್ಡಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

