ಶೋಷಿತರು ಅಭಿವೃದ್ಧಿ ಹೊಂದಿ
ಕನ್ನಡಪ್ರಭ ವಾರ್ತೆ, ಗದಗ, ಸೆ. 22
ಶೋಷಿತ ವರ್ಗದವರಿಗಾಗಿ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸದುಪಯೋಗ ಪಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ವಿ.ವಿ. ಕುಂಬಾರ ಹೇಳಿದರು.
ಅವರು ಶನಿವಾರ ನಗರದ ಲಯನ್ಸ್ ಕ್ಲಬ್ನ ಸಭಾಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಗದಗ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಸಂಯುಕ್ತವಾಗಿ ಸಂಘಟಿಸಿದ್ದ 2012-13 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಎಸ್ಸಿ, ಎಸ್ಟಿ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿದ್ಯಾರ್ಥಿ ಜೀವನ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಸಮುದಾಯದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಕೂಡ ನಿರ್ದಿಷ್ಟ ಮಟ್ಟದಲ್ಲಿ ಸಮುದಾಯದ ಜನರು ಅಭಿವೃದ್ಧಿ ಹೊಂದಿಲ್ಲ. ಎಲ್ಲರೂ ತಮ್ಮ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಅಭಿವೃದ್ಧಿಗಾಗಿ ಮಕ್ಕಳನ್ನು ಸಿದ್ಧಪಡಿಸಬೇಕು ಎಂದರು.
ಶಿಕ್ಷಕ ಎಸ್.ಎನ್.ಬಳ್ಳಾರಿ ಮಾತನಾಡಿ, ಜನಾಂಗದ ಹಿಂದಿನವರು ಅನುಭವಿಸಿದ ನೋವಿನ ಬಗ್ಗೆ ಇಂದಿನ ಪೀಳಿಗೆ ಸಿಂಹಾವಲೋಕನ ಮಾಡಿಕೊಂಡು ತಮ್ಮ ಜೀವನವನ್ನು ಸಾಗಿಸಬೇಕು. ಅಂದಾಗ ಮಾತ್ರ ಸಮಾಜ ಅಭಿವೃದ್ಧಿಯತ್ತ ಸಾಗಲು ಸಾಧ್ಯ. ಎಲ್ಲರೂ ಶಿಕ್ಷಿತರಾಗುವುದರ ಮೂಲಕ ಸಮಾಜವನ್ನು ಸನ್ನಡತೆಯತ್ತ ಕೊಂಡೊಯ್ಯಲು ಶ್ರಮಿಸಬೇಕು.
ಶೋಷಿತರ ಬದುಕಿನ ಬೆಳಕಾಗಿರುವ ಡಾ. ಬಿ.ಆರ್.ಅಂಬೇಡ್ಕರ್ ಅವರಿಂದಾಗಿ ಇಂದು ಶೋಷಿತ ಸಮುದಾಯ ಸಮಾಜದಲ್ಲಿ ಒಂದು ನೆಲೆ ಕಂಡುಕೊಳ್ಳಲು ಸಾಧ್ಯವಾಗಿದೆ.
ಎಲ್ಲ ಪಾಲಕರಲ್ಲಿ ತಮ್ಮ ಮಕ್ಕಳ ಭವಿಷ್ಯ ರೂಪಿಸುವ ಸಾಮರ್ಥ್ಯವನ್ನು ಅವರು ತುಂಬಿದ್ದಾರೆ. ಆದರೆ ಇಂದಿಗೂ ಕೂಡ ಹಕ್ಕುಗಳನ್ನು ಬಳಸಿಕೊಂಡು ಎಲ್ಲರೂ ನೆಮ್ಮದಿಯಿಂದ ಇದ್ದಾರೆಯೆ ಎಂಬುದನ್ನು ಎಲ್ಲರೂ ತಿಳಿದುಕೊಳ್ಳಬೇಕಿದೆ ಎಂದರು.
ಅಧ್ಯಕ್ಷತೆಯನ್ನು ಗದಗ ತಾಲೂಕು ದಲಿತ ಸಂಘರ್ಷ ಸಮಿತಿ ಸಂಚಾಲಕ ಮಾರುತಿ ಗುಡಿಮನಿ ವಹಿಸಿದ್ದರು. ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ರಾಷ್ಟ್ರೀಯ ನಿರ್ಮಾಣ ರತ್ನ ಪ್ರಶಸ್ತಿ ಪುರಸ್ಕೃತ ವಿ.ಆರ್. ಗೋವಿಂದಗೌಡ್ರ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಎಸ್.ಎಚ್. ಅಂಗಡಿ, ಬಸವರಾಜ ಕಡೇಮನಿ, ಸಂತೋಷ ಬಳ್ಳಾರಿ, ಎಲ್.ಎನ್. ಮೆಸ್ತಾ, ಸತೀಶ ಹೂಲಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

