ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಪಾಟೀಲ
ಮುಂಡರಗಿ: ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಕ್ರೀಡಾ ಮನೋಭಾವನೆಯಿಂದ ಭಾಗವಹಿಸುವುದು ಮುಖ್ಯ ಎಂದು ಮುಂಡರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ ಹೇಳಿದರು.
ಅನ್ನದಾನೀಶ್ವರ ಪಪೂ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಅನ್ನದಾನ ವಿದ್ಯಾ ಸಮಿತಿಯ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪ್ರೌಢಶಾಲೆ, ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಮಾತನಾಡಿದರು.
ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತೆ ಪ್ರಯತ್ನ ಮಾಡಬೇಕು. ಅಂತಹ ಕ್ರೀಡಾಪಟುಗಳಿಗೆ ತರಬೇತಿ, ಸಹಾಯ ನೀಡಲು ಸಿದ್ಧ ಎಂದರು. ನಾಡೋಜ ಡಾ ಅನ್ನದಾನೀಶ್ವರ ಶ್ರೀಗಳು ಕ್ರೀಡಾಕೂಟ ಉದ್ಘಾಟಿಸಿದರು. ಡಾ ನಿಂಗು ಸೊಲಗಿ ಮಾತನಾಡಿ, ಓದುತ್ತಾ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತಹ ತರಬೇತಿ ಪಡೆದುಕೊಳ್ಳಬೇಕು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೂ ಸಾಕಷ್ಟು ಮಹತ್ವ ಕೊಟ್ಟು ಒಳ್ಳೆಯ ಕ್ರೀಡಾಪಟುಗಳನ್ನು ತಯಾರು ಮಾಡಬೇಕು ಎಂದರು. ತಾಪಂ ಇಒ ಡಿ. ಮೋಹನ ಪ್ರಾಸ್ತಾವಿಕ ಮಾತನಾಡಿದರು. ತಾಪಂ ಉಪಾಧ್ಯಕ್ಷ ಅಕ್ಕಮಹಾದೇವಿ ಹಾರೋಗೇರಿ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ವಿ.ಎಫ್. ಅಂಗಡಿ, ಎಂ.ಡಿ. ಭಾವಿಮನಿ, ಕಮ್ಮಾರ, ಶೀರನಹಳ್ಳಿ, ಜಗದೀಶ ಡೊಂಬರ ಉಪಸ್ಥಿತರಿದ್ದರು. ಬಿಇಓ ಎಂ.ಎ. ರಡ್ಡೇರ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

