ಮಕ್ಕಳ ಪ್ರತಿಭೆ ಹೊರಹಾಕಲು ಕ್ರೀಡಾಕೂಟ ಸಹಕಾರಿ: ಗದ್ಯಾಳ
ಗದಗ: ಮಕ್ಕಳಲ್ಲಿ ಅಡಕವಾಗಿರುವ ಪ್ರತಿಭೆಗಳನ್ನು ಹೊರಹಾಕಲು ಕ್ರೀಡಾಕೂಟಗಳು ಸಹಕಾರಿ ಎಂದು ಗದಗ ಉಪವಿಭಾಗಾಧಿಕಾರಿ ಐ.ಜಿ. ಗದ್ಯಾಳ ಹೇಳಿದರು.
ಭಾನುವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಗದಗ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲಾಮಟ್ಟದ ಪಂಚಾಯತ್ ಯುವ ಕ್ರೀಡಾ ಔರ್ ಖೇಲ್ ಅಭಿಯಾನ(ಪೈಕಾ) ದಸರಾ, ಪೈಕಾ ಮಹಿಳಾ ಮತ್ತು ಪೈಕಾ ಗ್ರಾಮೀಣ ಕ್ರೀಡಾಕೂಟಗಳನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಂದು ಮಗುವಿನಲ್ಲಿಯೂ ಒಂದೊಂದು ಪ್ರತಿಭೆ ಇದ್ದೇ ಇರುತ್ತದೆ. ಆದರೆ ಆ ಪ್ರತಿಭೆಯನ್ನು ಹೊರತರಲು ಸೂಕ್ತ ವೇದಿಕೆ ಬೇಕು. ಕಾರಣ ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆ ಗುರಿತಿಸಿ ಪ್ರೋತ್ಸಾಹಿಸುವ ಕಾರ್ಯ ಮಾಡಬೇಕು. ಕ್ರೀಡೆಯಲ್ಲಿ ಸೋಲು-ಗೆಲವು ಸಾಮಾನ್ಯ, ಅದನ್ನು ಲೆಕ್ಕಿಸದೇ ಕ್ರೀಡಾಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಸರ್ಕಾರ ಕ್ರೀಡಾಚಟುವಟಿಕೆಗಳಿಗಾಗಿಯೇ ಹಲವಾರು ಯೋಜನೆ ರೂಪಿಸುತ್ತಿದ್ದು, ವಿದ್ಯಾರ್ಥಿಗಳು ಸರ್ಕಾರವು ನೀಡುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಬೇಕು. ಜಿಲ್ಲೆ, ರಾಜ್ಯದ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿಯನ್ನು ತರುವಂತಾಗಬೇಕು ಎಂದು ಹೇಳಿದರು. ಅಂತಾರಾಷ್ಟ್ರೀಯ ಕುಸ್ತಿಪಟು ಪ್ರೇಮಾ ಹುಚ್ಚಣ್ಣವರ, ಯುವಜನ ಮತ್ತು ಕ್ರೀಡಾಧಿಕಾರಿ ಕೆ. ಶಂಕರ, ಜಿಲ್ಲೆಯ ಗದಗ, ರೋಣ, ನರಗುಂದ ಹಾಗೂ ಶಿರಹಟ್ಟಿ ತಾಲೂಕಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. ಬಿ.ಎಚ್. ಚಕ್ರಣ್ಣವರ ಸ್ವಾಗತಿಸಿದರು. ವೈ.ಕೆ.ಚೌಡಾಪುರ ನಿರೂಪಿಸಿದರು. ಎಸ್.ಪಿ. ಪೂಜಾರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

