ಗದಗ

ಗಲಭೆ: ಲಕ್ಷ್ಮೇಶ್ವರ ಶಾಂತ

Published On :

ಲಕ್ಷ್ಮೇಶ್ವರ: ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪೀಡಿತ ಲಕ್ಷೇಶ್ವರ ಪಟ್ಟಣವು ಈಗ ಶಾಂತವಾಗಿದ್ದು, ಗಲಭೆ ಕಾರಣೀಭೂತರಾಗಿರುವ ಜನರನ್ನು ಬಂಧಿಸುವ ಕಾರ್ಯ ಮುಂದುವರೆದಿದ್ದು, ಸಾರ್ವಜನಿಕರು ಆತಂಕಗೊಳ್ಳಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಸ್.ಡಿ. ಶರಣಪ್ಪ ಸೋಮವಾರ ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭ ತಿಳಿಸಿದರು.
ಶನಿವಾರ ತಡರಾತ್ರಿ ಗಣಪತಿ ವಿಸರ್ಜನೆ ವೇಳೆಯಲ್ಲಿ ಕಲ್ಲು ತೂರಾಟ ನಡೆದು, ಲಾಠಿ ಪ್ರಹಾರ ಜರುಗಿ ಪಟ್ಟಣದಲ್ಲಿ ಸೋಮವಾರ ಸಂಜೆವರೆಗೆ 2 ದಿನಗಳ ಕಾಲ 144 ಕಲಂ ಅನ್ವಯ ನಿಷೇಧಾಜ್ಞೆ ವಿಧಿಸಲಾಗಿತ್ತು. ನಿಷೇಧಾಜ್ಞೆ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಪರಿಸ್ಥಿತಿ ಶಾಂತವಾಗಿದ್ದು, ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯ ನಿರ್ವಹಿಸಿದವು. ಘಟನೆಗೆ ಕಾರಣೀಭೂತರಾದ ಮತ್ತೆ 14 ಜನರನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಹಿರಿಯ, ಕಿರಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.