ಪೌರಕಾರ್ಮಿಕರ ಸೇವಾಕಾರ್ಯ ಶ್ಲಾಘನೀಯ: ಮುತ್ತಣ್ಣ ಸಂಗಳದ
ರೋಣ: ನಗರವನ್ನು ಸ್ವಚ್ಚ ಹಾಗೂ ಸುಂದರವಾಗಿಡುವಲ್ಲಿ ಪೌರ ಕಾರ್ಮಿಕರ ಕಾರ್ಯ ಪ್ರಮುಖವಾಗಿದ್ದು, ಆ ದಿಶೆಯಲ್ಲಿ ನಿತ್ಯ ಶ್ರಮಿಸುತ್ತಿರುವ ಕಾರ್ಮಿಕರ ಸೇವಾ ಕಾರ್ಯ ಶ್ಲಾಘನೀಯವಾಗಿದೆ ಎಂದು ಪುರಸಭೆ ಅಧ್ಯಕ್ಷ ಮುತ್ತಣ್ಣ ಸಂಗಳದ ಹೇಳಿದರು.
ಅವರು ಸೋಮವಾರ ಸ್ಥಳೀಯ ಪುರಸಭೆ ಸಭಾಭವನದಲ್ಲಿ ಪುರಸಭೆ ನೌಕರ ವರ್ಗ ಹಾಗೂ ಆಡಳಿತ ಮಂಡಳಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಉಪಾಧ್ಯಕ್ಷೆ ಲಕ್ಷ್ಮೀ ಗಡಗಿ ಮಾತನಾಡಿ, ಪೌರ ಕಾರ್ಮಿಕರು ಪಟ್ಟಣದ ಸ್ವಚ್ಚತೆಯಲ್ಲಿ ತೊಡಗುವ ಸಂದರ್ಭ ಅಗತ್ಯ ಸಲಕರಣೆಗಳನ್ನು ಬಳಸಿಕೊಳ್ಳಬೇಕು. ಹಾನಿಕಾರಕ ವಸ್ತುಗಳನ್ನು ಬರಿಗೈಯಿಂದ ಮುಟ್ಟದೆ ಯಂತ್ರಗಳ ಸಹಾಯ ಪಡೆಯಬೇಕು. ಪೌರ ಕಾರ್ಮಿಕರಿಗಿರುವ ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವಲ್ಲಿ ಪುರಸಭೆ ಆಡಳಿತ ಮತ್ತು ಅಧಿಕಾರಿ ವರ್ಗ ಪ್ರಾಮಾಣಿಕವಾಗಿ ಶ್ರಮಿಸುತ್ತದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಸರ್ಕಾರ ವಿತರಿಸಲ್ಪಟ್ಟ ವಿಶೇಷ ವಾರ್ಷಿಕ ಭತ್ಯೆಯಾದ ರು. 2 ಸಾವಿರ ಚೆಕ್ಕನ್ನು ವಿತರಿಸಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಪುರಸಭೆ ಸದಸ್ಯ ಮಂಜುನಾಥ ಹಾಳಕೇರಿ, ಶಫೀಕ ಮೂಗನೂರ, ಅಜ್ಜಪ್ಪ ರಡ್ಡೇರ, ಖಾದರಸಾಬ ಸಂಕನೂರ, ಬಾಬುಸಾಬ ಚಿನ್ನೂರ, ಯಮನವ್ವ ಜುಮ್ಮನಕಟ್ಟಿ, ಶಿವಪ್ಪ ಕರಲಿಂಗಣ್ಣವರ, ಮಾಜಿ ಸದಸ್ಯ ಕೆ.ಕೆ. ಮುಲ್ಲಾ, ಹನಮಂತಪ್ಪ ಹಾದಿಮನಿ, ರಾಜಪ್ಪ ತೆಗ್ಗಿನಮನಿ ಇದ್ದರು.
ಪುರಸಭೆ ವ್ಯವಸ್ಥಾಪಕ ಬಸಯ್ಯ ಅಂಗಡಿ ಸ್ವಾಗತಿಸಿ, ನಿರೂಪಿಸಿದರು. ಮಾರುತಿ ಚಲವಾದಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

