ಸತತ ಪ್ರಯತ್ನದಿಂದ ಯಶಸ್ಸು
ಕನ್ನಡಪ್ರಭ ವಾರ್ತೆ, ಗದಗ, ಸೆ. 23
ವಿದ್ಯಾರ್ಥಿಗಳಲ್ಲಿ ಒಂದಿಲ್ಲ ಒಂದು ಪ್ರತಿಭೆಯಿದೆ, ನಿರಂತರ ಪ್ರಯತ್ನದಿಂದ ತಮ್ಮ ಪ್ರತಿಭೆಯನ್ನು ವಿವಿಧ ವೇದಿಕೆಗಳ ಮೂಲಕ ಸದುಪಯೋಗ ಪಡಿಸಿಕೊಂಡಲ್ಲಿ ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯುತ್ತದೆ ಎಂದು ವಿಜ್ಞಾನ ಪರಿಷತ್ತಿನ ರಾಜ್ಯಾಧ್ಯಕ್ಷ ಪ್ರಾ. ಎಸ್.ವಿ. ಸಂಕನೂರ ಹೇಳಿದರು.
ಅವರು ಈಚೆಗೆ ವಿ.ಡಿ.ಎಸ್. ಬಾಲಕರ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಹಾಗೂ ಸೇವಾ ನಿವೃತ್ತಿ ಹೊಂದಿದ ಬಿ.ಎಫ್. ಅಗಸಿಮನಿಯವರ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಸಮಯಪ್ರಜ್ಞೆ, ಕರ್ತವ್ಯ ಪ್ರಜ್ಞೆ ಹಾಗೂ ಪ್ರಾಮಾಣಿಕ ಪ್ರಯತ್ನದಿಂದ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಯಶಸ್ಸು ಹೊಂದಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂರವರು ಸಂದೇಶ ನೀಡಿದಂತೆ ಯಶಸ್ಸಿನ ಕನಸು ಕಾಣವುದು ಅದರ ಬಗ್ಗೆ ಚಿಂತಿಸುವುದು ಹಾಗೂ ಅದನ್ನು ಸಾಕಾರಗೊಳಿಸಲು ಕಾರ್ಯತತ್ಪರಾಗಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾದಾನ ಸಮಿತಿಯ ಅಧ್ಯಕ್ಷ ಧೀರಣ್ಣ ಹುಯಿಲಗೋಳ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಬೇಕು ಎಂದರು.
30 ವರ್ಷಕ್ಕೂ ಹೆಚ್ಚುಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎಫ್. ಅಗಸಿಮನಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶ್ರೀನಿವಾಸ ಹುಯಿಲಗೋಳ ಮಾತನಾಡಿದರು. ಪ್ರಾ. ಎಂ.ಸಿ. ಕಟ್ಟಿಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಿ.ಎಲ್. ಪಾಟೀಲ ಪರಿಚಯಿಸಿದರು. ಜಿ.ಡಿ. ಸಂಶಿ ನಿರೂಪಿಸಿದರು. ಎಸ್.ಎ. ಪೀರಜಾದೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರೊ. ಕಿಶೋರಬಾಬು ನಾಗರಕಟ್ಟಿ ವಂದಿಸಿದರು. ಉಪನ್ಯಾಸಕ ಬಿ.ಬಿ. ಮಿರ್ಜಿ, ಪಿ.ಕೆ. ಇನಾಮದಾರ, ಪಿ.ಡಿ. ಕಾನಡೆ, ಕೆ.ಎ. ಅರಳಿ, ಎಸ್.ಬಿ. ಕರ್ಜಗಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

