ಗದಗ

ಮುಂಡರಗಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Published On :

ಕನ್ನಡಪ್ರಭ ವಾರ್ತೆ, ಮುಂಡರಗಿ, ಸೆ. 23
ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆಯಂತಹ ಕಾರ್ಯಕ್ರಮಗಳ ಆಯ್ಕೆ ಮಾಡಿಕೊಂಡಿರುವುದು ಉತ್ತಮವಾದ ಕಾರ್ಯ ಎಂದು ಪುರಸಭೆ ಸದಸ್ಯ ಬಸವರಾಜ ರಾಮೇನಹಳ್ಳಿ ಹೇಳಿದರು.
ಅವರು ಈಚೆಗೆ ಪಟ್ಟಣದ ಮಂಜುನಾಥ ದೇವಸ್ಥಾನದಲ್ಲಿ ನಡೆದ ಚಂದನ ನಗರ, ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಗಂಗಾಪುರ ಇವರ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ಪಠ್ಯಪುಸ್ತಕ, ನೋಟ್ ಬುಕ್ ವಿತರಣಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಡ ವಿದ್ಯಾರ್ಥಿಗಳಿಗೋಸ್ಕರ ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಆಗಲಿ, ಬಡ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಕಾರ್ಯಕ್ರಮಗಳು ನಡೆಯಲಿ ಎಂದರು. ಗವಿಸಿದ್ದಯ್ಯ ಹಳ್ಳಿಕೇರಿಮಠ ಮಾತನಾಡಿ, ಇಂದಿನ ಕಾಲದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಶಿಸಿ ಹೋಗುತ್ತಿದೆ, ರಂಗಭೂಮಿಯಲ್ಲಿ ಬಂದು ಮಾತನಾಡುವಂತ ಕಲೆ ಕಾಣದಂತಾಗಿದೆ, ಜಾನಪದ ಗೀತೆಗಳು ನಶಿಸಿ ಹೋಗಿ ಆಶ್ಲೀಲವಾದ ಗೀತೆಗಳತ್ತ ಇಂದಿನ ನಾಗರಿಕರು ನಡೆಯುತ್ತಿದ್ದಾರೆ. ನಾವು ಶುದ್ಧವಾದರೆ ಮಾತ್ರ ಜಗತ್ತು ಶುದ್ಧವಾಗುತ್ತದೆ. ಸಮಾಜಮುಖಿಯಾದ ಕಾರ್ಯಗಳು ನಡೆಯಬೇಕು ಬಡತನ ಮತ್ತು ಹಸಿವು ಕಲಿಸುವಂತಹ ಪಾಠವನ್ನು ಜಗತ್ತಿನ ಯಾವ ವಿದ್ಯಾಲಯವು ಕಲಿಸಲಾರದು ಎಂದರು.
ಅಧ್ಯಕ್ಷತೆಯನ್ನು ದೇವಪ್ಪ ಇಟಗಿ ವಹಿಸಿದ್ದರು. ಅತಿಥಿಗಳಾಗಿ ಕುರವತ್ತೆಪ್ಪ ಅರಿಷಣದ, ಕೃಷ್ಣ ಗಾರವಾಡ, ಈರಣ್ಣ ಹಳ್ಳಿಕೇರಿ, ಬಸವರಾಜ ಕವಲೂರ ಉಪಸ್ಥಿತರಿದ್ದರು. ಯುವರಾಜ ರಾಮೇನಹಳ್ಳಿ ಸ್ವಾಗತಿಸಿ, ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.