ವೇತನ ಹೆಚ್ಚಳಕ್ಕೆ ಕ್ರಮ: ಲಕ್ಕುಂಡಿ
ಶಿರಹಟ್ಟಿ: ಸುಮಾರು ವರ್ಷಗಳಿಂದ ಸರ್ಕಾರ ನೀಡುವ ಕಡಿಮೆ ವೇತನ ಪಡೆದು ಪಪಂ ಕಾರ್ಯಾಲಯದಲ್ಲಿ ದಿನಗೂಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿರುವವರ ವೇತನ ಹೆಚ್ಚಳ ಹಾಗೂ ಕಾಯಂಮಾತಿಗೆ ಆಡಳಿತ ಮಂಡಳಿ ಸಭೆ ಕರೆದು ಚರ್ಚಸಿ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ ಹೇಳಿದರು.
ಸೋಮವಾರ ಪಟ್ಟಣದ ಬೇಂದ್ರೆ ಭವನದಲ್ಲಿ ಆಚರಿಸಲಾದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜ್ಯಾದ್ಯಂತ ಪೌರಾಡಳಿತ ಇಲಾಖೆಯಲ್ಲಿ ಪುರಸಭೆ, ಪಪಂ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳು ಸೇರಿದಂತೆ ಇಲ್ಲಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗಾಗಿ ಪ್ರತಿ ವರ್ಷ ಸೆ. 23ರಂದು ಪೌರಕಾರ್ಮಿಕ ದಿನಾಚರಣೆ ಆಚರಿಸುವಂತೆ ಕಳೆದ ವರ್ಷದಿಂದ ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆಯಲ್ಲಿ ಈ ವರ್ಷವೂ ಆಚರಣೆ ಮಾಡಲಾಗುತ್ತಿದೆ.
ಪಪಂ ಸದಸ್ಯ ಹುಮಾಯೂನ ಮಾಗಡಿ, ಗೂಳಪ್ಪ ಕರಿಗಾರ, ಸಂತೋಷ ಕುರಿ, ಬುಡನಶ್ಯಾ ಮಕಾನದಾರ, ಮಾಬೂಸಾಬ ಮುಳಗುಂದ ಮಾತನಾಡಿದರು.
ಪಪಂ ಉಪಾಧ್ಯಕ್ಷೆ ಮಿನಾಕ್ಷಿ ತಳವಾರ, ಸಿ.ಕೆ. ಮುಳಗುಂದ, ಜೆ.ಆರ್. ಕುಲಕರ್ಣಿ, ಲಲಿತಾ ಕಲ್ಲಪ್ಪನವರ, ಸುಜಾತ ಗೋಡೆಣ್ಣವರ, ಸಿದ್ದು ಅಮರಾಪೂರ ಮತ್ತಿತರರು ಇದ್ದರು. ಮಂಜುಳಾ ಗುರಿಕಾರ ಸ್ವಾಗತಿಸಿದರು. ವಿಜಯಲಕ್ಷ್ಮೀ ಹಿರೇಮಠ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

