ಗದಗ

ಮೀನುಗಾರಿಕೆ ತರಬೇತಿ

Published On :

ಗದಗ: ಅಕ್ಟೋಬರ್ 21ರಿಂದ 35ನೇ ತಂಡದ ಒಳನಾಡು ಮೀನುಗಾರಿಕೆ ತರಬೇತಿಯು (ಮಹಿಳೆಯರಿಗೆ ಮಾತ್ರ) ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೀನುಗಾರಿಕೆ ತರಬೇತಿ ಕೇಂದ್ರದಲ್ಲಿ ಪ್ರಾರಂಭವಾಗುವುದು. ತಂಡದಲ್ಲಿ ಸುಮಾರು 40 ಗ್ರಾಮೀಣ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ತರಬೇತಿಯು 2 ತಿಂಗಳ ಅವಧಿಯಾಗಿದ್ದು ಪ್ರತಿ ಅಭ್ಯರ್ಥಿಗೆ ಮಾಸಿಕ ರು. 1 ಸಾವಿರ ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಯು ತರಬೇತಿಯ ಮಧ್ಯದಲ್ಲಿ ಬಿಟ್ಟು ಹೋದಲ್ಲಿ ಅಂಥವರಿಂದ ಇಲಾಖೆಯಿಂದ ಕೊಡಲ್ಪಟ್ಟ ಶಿಷ್ಯವೇತನವನ್ನು ಅವರ ಸ್ವಂತ ಜವಾಬ್ದಾರಿಯಿಂದ ವಸೂಲು ಮಾಡಲಾಗುವುದು. ತರಬೇತಿ ಅವಧಿಯಲ್ಲಿ ಮೀನು ಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಣೆ, ಬಲೆ ಹೆಣೆಯುವುದು, ದುರಸ್ತಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ, ಇತ್ತೀಚಿನ ಬೆಳವಣಿಗೆಗಳು ಮುಂತಾದ ವಿಷಯಗಳಲ್ಲಿ ತರಬೇತಿ ನೀಡಲಾಗುವುದು. ಆಸಕ್ತರ ವಯಸ್ಸು 18-40ರ ಒಳಗಿರಬೇಕು. ಅರ್ಜಿದಾರರು ಬೀದರ್, ಗುಲ್ಬರ್ಗ, ಯಾದಗಿರಿ, ಚಿತ್ರದುರ್ಗ, ರಾಯಚೂರು, ಧಾರವಾಡ, ಬಿಜಾಪುರ, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ಗದಗ, ಕೊಪ್ಪಳ, ದಾವಣಗೆರೆ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ ಜಿಲ್ಲೆಯವರಾಗಿಬೇಕು. ತರಬೇತಿ ಅವಧಿಯಲ್ಲಿ ಇಲಾಖೆಯು ಒದಗಿಸುವ ಉಚಿತ ವಸತಿ ಗೃಹದಲ್ಲಿ ಕಡ್ಡಾಯವಾಗಿ ತಂಗಲೆಬೇಕು. ಮೀನುಗಾರಿಕೆ ವೃತ್ತಿ ನಡೆಸುತ್ತಿರುವವರು, ಮೀನುಗಾರಿಕೆ ಸಹಕಾರ ಸಂಘದ ಸದಸ್ಯರಿಗೆ ಆದ್ಯತೆ ನೀಡಲಾಗುವುದು. ಸಂದರ್ಶನದ ಮೂಲಕ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಮೀನುಗಾರಿಕೆ ಕಚೇರಿಗಳು, ಜಿಪಂ, ಜಿಲ್ಲಾಧಿಕಾರಿ ಕಚೇರಿಯ ನೋಟಿಸ್ ಬೋರ್ಡ್‌ನಲ್ಲಿ ಕಚೇರಿ ಪ್ರಕಟಣೆಯಲ್ಲಿ ನೋಡಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನವಾಗಿದೆ. ಮಾಹಿತಿಗಾಗಿ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ ಮೀನುಗಾರಿಕೆ ಕಚೇರಿಗಳು, ಜಿಲ್ಲಾಧಿಕಾರಿ ಕಚೇರಿ ನೋಟಿಸ್ ಬೋರ್ಡ್‌ನಲ್ಲಿ ಕಚೇರಿಯ ಪ್ರಕಟಣೆ ನೋಡಬಹುದಾಗಿದೆ ಎಂದು ಮೀನುಗಾರಿಕೆ ಸಹಾಯಕ ನಿರ್ದೇಶಕರು, (ಶ್ರೇಣಿ-1), ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್. ಪ್ರಾಜೆಕ್ಟ್‌ನ ಪ್ರಕಟಣೆ ತಿಳಿಸಿದೆ.
ಇಂದಿನಿಂದ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಗದಗ: 2013-14ನೇ ಸಾಲಿನ ಐಇಡಿಎಸ್‌ಎಸ್ ಯೋಜನೆಯಡಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಗಳಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ಸೆ. 25 ಹಾಗೂ 26ರಂದು ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗಾಗಿ ವೈದ್ಯಕೀಯ ಶಿಬಿರ ಆಯೋಜಿಸಲಾಗಿದೆ. ರೋಣ ಹಾಗೂ ನರಗುಂದ ವಲಯದವರಿಗಾಗಿ ಸೆ. 25ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ರೋಣ ಬಿಆರ್‌ಸಿಯಲ್ಲಿ, ಸೆ. 26ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಮುಂಡರಗಿ, ಶಿರಹಟ್ಟಿ, ಗದಗ ಶಹರ, ಗದಗ ಗ್ರಾಮೀಣ ವಲಯದವರಿಗಾಗಿ ಗದಗ ನಗರದ ಸ.ಹಿ.ಪ್ರಾ.ಶಾಲೆ ಮರಾಠಿ ಇಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗಾಗಿ ಶಿಬಿರ ಆಯೋಜಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.