ಗದಗ

ಆರ್‌ಬಿಐ ನಿಯಮದಂತೆ ಕಾರ್ಯನಿರ್ವಹಿಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 25
ಕೇಂದ್ರ ಸರ್ಕಾರದ ಮಹತ್ತರ ಯೋಜನೆಯಾದ ಆಧಾರ ಕುರಿತು ಸರ್ವೋಚ್ಚ ನ್ಯಾಯಾಲಯದ ಸೂಚನೆಯಿಂದ ಸಾರ್ವಜನಿಕರು ಗೊಂದಲಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರ ಖಾತೆಗೆ ನೇರ ಹಣ ವರ್ಗಾಯಿಸುವ ಯೋಜನೆ ಕುರಿತು ಬ್ಯಾಂಕ್‌ಗಳು ರಿಸರ್ವ್‌ಬ್ಯಾಂಕ್ ಸೂಚನೆಯಂತೆ ಕಾರ್ಯನಿರ್ವಹಿಸಬೇಕು ಎಂದು ಲೋಕಸಭಾ ಸದಸ್ಯ ಶಿವಕುಮಾರ ಉದಾಸಿ ಹೇಳಿದರು.
ನಗರದ ಜಿಪಂ ಸಭಾಭವನಲ್ಲಿ ಬುಧವಾರ ಜರುಗಿದ ಜಿಲ್ಲಾಮಟ್ಟದ ಲೀಡ್ ಬ್ಯಾಂಕ್‌ನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಹಾಗೂ ನ್ಯಾಯಾಲಯದ ಸೂಚನೆಯಿಂದಾಗಿ ಗ್ರಾಹಕರಲ್ಲಿ ಗೊಂದಲ ಸೃಷ್ಟಿಯಾಗಿದ್ದು, ನಿವಾರಿಸುವ ಕಾರ್ಯ ತ್ವರಿತವಾಗಿ ಜರುಗಬೇಕಿದೆ. ಜನನಿ ಸುರಕ್ಷಾ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆ ಪ್ರಾರಂಭಕ್ಕೆ ಬ್ಯಾಂಕ್‌ಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ಆರೋಪ ಕೇಳಿಬರುತ್ತಿದ್ದು, ತಕ್ಷಣ ಯೋಜನೆಯ ಫಲಾನುಭವಿಗಳಿಗೆ ಶೂನ್ಯಖಾತೆ ಸೌಲಭ್ಯವನ್ನು ಒದಗಿಸಲು ಸೂಚಿಸಿದರು. ಜಿಲ್ಲೆಯ 9 ಪಟ್ಟಣಗಳ ವ್ಯಾಪ್ತಿಯಲ್ಲಿನ ವಾರ್ಡ್‌ಗಳಲ್ಲಿ ಪ್ರತಿ ಕುಟುಂಬವು ಬ್ಯಾಂಕ್ ಖಾತೆ ಹೊಂದುವಂತೆ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದ್ದು, ಈ ಕುರಿತು ಮತ್ತಷ್ಟು ಜಾಗೃತಿ ಮೂಡಿಸಬೇಕಿದೆ ಎಂದರು. ಸಭೆಯಲ್ಲಿ ಜಿಪಂ ಸಿಇಒ ವೀರಣ್ಣ ತುರಮರಿ, ಲೀಡ್‌ಬ್ಯಾಂಕ್ ಮುಖ್ಯ ಪ್ರಬಂಧಕ ಕೆ. ನರಸಿಂಹಲು, ಹುಬ್ಬಳ್ಳಿ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕ ವಿದ್ಯಾಧರ, ರಿಸರ್ವ್ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಆರ್.ಪಿ. ಚೌದರಿ ಸೇರಿದಂತೆ ವಿವಿಧ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.