ಶಿಸ್ತು, ಸಮಯ ಪಾಲನೆ ಅವಶ್ಯ
ಗಜೇಂದ್ರಗಡ: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಸಮಯಕ್ಕೆ ಹೆಚ್ಚಿನ ಮಹತ್ವ ನೀಡಿದಲ್ಲಿ ಜೀವನದಲ್ಲಿ ಉನ್ನತವಾದ ಸಾಧನೆ ಮಾಡಲು ಸಾಧ್ಯ ಎಂದು ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಪ್ರಾ. ಎಸ್.ವಿ. ಸಂಕನೂರ ಹೇಳಿದರು. ಅವರು ಸ್ಥಳೀಯ ಎಸ್.ಎಂ. ಭೂಮರಡ್ಡಿ ಪದವಿ ಮಹಾವಿದ್ಯಾಲಯದಲ್ಲಿ, ವಿದ್ಯಾ ಪೋಷಕ ಸಂಸ್ಥೆ ವತಿಯಿಂದ ಗದಗ ಮತ್ತು ಕೊಪ್ಪಳ ಜಿಲ್ಲೆಯ 80 ವಿದ್ಯಾರ್ಥಿಗಳಿಗೆ ನೀಡಲಾದ ಸಹಾಯಧನ ಚೆಕ್ ವಿತರಿಸಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಗಜೇಂದ್ರಗಡ ವಿದ್ಯಾವರ್ಧಕ ಸಂಘದ ಡಾ. ಬಿ.ವಿ. ಕಂಬಳ್ಯಾಳ ಮಾತನಾಡಿದರು. ಜಿಲ್ಲಾ ವಿದ್ಯಾಪೋಷಕ ಸಂಸ್ಥೆಯ ಫೆಸಿಲೆಟೇಟರ್ ಆರ್.ಕೆ. ಬಾಗವಾನ ಹಾಗೂ ಅಮರೇಶ ಗಾಣಿಗೇರ ಮಾತನಾಡಿ, ಬರುವ ಶೈಕ್ಷಣಿಕ ವರ್ಷದಿಂದ ವಿದ್ಯಾಪೋಷಕ ಸಂಸ್ಥೆಗೆ ಧನಸಹಾಯ ನೀಡಿ ವಿದ್ಯಾರ್ಥಿಗಳನ್ನು ದತ್ತು ತೆಗೆದುಕೊಳ್ಳುವದಾಗಿ ವಾಗ್ದಾನ ಮಾಡಿದರು. ಪ್ರಾಚಾರ್ಯ ಉಮೇಶ ಶಿರೋಳ, ಪ್ರಭು ಚವಡಿ, ಬಿ.ಎಂ. ಸಜ್ಜನ, ಬಸವರಾಜ ಮೂಲಿಮನಿ, ಶರಣಪ್ಪ ರೇವಡಿ, ಧಾರವಾಡ ವಿದ್ಯಾಪೋಷಕ ಸಂಸ್ಥೆಯ ರತ್ನಾ ಹಿಪ್ಪರಿ, ಉಮಾಮಹೇಶ್ವರಿ ಇದ್ದರು. ಬಸವರಾಜ ಮುನವಳ್ಳಿ ಸ್ವಾಗತಿಸಿದರು. ಸಂಗಮೇಶ ಹೂಲಗೇರಿ ನಿರೂಪಿಸಿದರು. ಶಿವಾಜಿ ಹೊರಪೇಟಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

