ಗದಗ

ಯೋಜನೆಗಳ ಸಮರ್ಪಕ ಜಾರಿಗೆ ಪಾಟೀಲ್ ಸೂಚನೆ

Published On :

ಕನ್ನಡಪ್ರಭ ವಾರ್ತೆ, ಗದಗ, ಸೆ. 25
ಸರ್ಕಾರ ನೊಂದವರು, ಬಡವರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸಮರ್ಪಕ ಜಾರಿಗೆ ಅಧಿಕಾರಿಗಳು ಶ್ರಮಿಸಬೇಕು ಎಂದು ರೋಣ ಶಾಸಕ ಜಿ.ಎಸ್.ಪಾಟೀಲ ಹೇಳಿದರು.
ಅವರು ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಮಂಗಳವಾರ ಕಂದಾಯ ಇಲಾಖೆ ಮತ್ತು ಜಿಲ್ಲಾಡಳಿತ ಗದಗ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಅರ್ಹರಿಗೆ ಆದೇಶ ಪತ್ರ ನೀಡಿ ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜತೆಗೂಡಿಕೊಂಡು ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿ ಈ ಪಿಂಚಣಿ ಸೌಲಭ್ಯವನ್ನು ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ಮಾಜಿ ಪ್ರಧಾನ ಮಂತ್ರಿ ದಿ ಇಂದಿರಾಗಾಂಧಿ ಜಾರಿಗೆ ತಂದಿದ್ದು, ಅದನ್ನು ಈ ಹಿಂದೆ ಆಡಳಿತ ನಡೆಸಿದ ಬಿಜೆಪಿ ಸರ್ಕಾರವು ಸಮರ್ಪಕವಾಗಿ ಜಾರಿಗೆ ತಂದಿರಲಿಲ್ಲ. ಆದರೆ ಈಗ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರವು ರಾಜ್ಯದಲ್ಲಿರುವ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ಈ ಯೋಜನೆ ತಲುಪಲಿ ಎನ್ನುವ ಸದುದ್ದೇಶದಿಂದ ಈ ರೀತಿ ಅದಾಲತ್‌ಗಳನ್ನು ಮಾಡಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಗದಗ ತಹಸೀಲ್ದಾರ್ ಜಯಶ್ರೀ ಶಿಂತ್ರೆ, ಜಿಪಂ ಮಾಜಿ ಅಧ್ಯಕ್ಷ ನಿಂಗಪ್ಪ ಬೇವಿನಮರದ ಮುಂತಾದವರು ಮಾತನಾಡಿದರು.
ಗ್ರಾಪಂ ಅಧ್ಯಕ್ಷೆ ಸುಮಂಗಲಾ ಜಗ್ಗಲ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯೆ ಲಲಿತಾ ಆಣ್ಣಿಗೇರಿ, ಗ್ರಾಪಂ ಸದಸ್ಯೆ ಮರಿತಂಗೆಮ್ಮ ನವಲಗುಂದ, ಜೈತುನಬಿ ಮೀರಾನಾಯ್ಕ, ಶಿವಪುತ್ರವ್ವ ಕಮಾಣಿ, ಕುಮಾರಸ್ವಾಮಿ ಬಳಿಗೇರಮಠ, ವಿ.ಪಿ. ಪೂಜಾರ, ಡಿ.ಟಿ. ವಾಲ್ಮೀಕಿ, ಬಿ.ಎಸ್. ಕಣ್ಣೂರ ಉಪಸ್ಥಿತರಿದ್ದರು. ವಿದ್ಯಾಧರ ದೊಡ್ಡಮನಿ ಸ್ವಾಗತಿಸಿದರು. ಪ್ರಕಾಶ ಕುಲಕರ್ಣಿ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.