ಗದಗ

ಸಮಾಜದ ಅಭಿವೃದ್ಧಿಗೆ ಶ್ರಮಿಸಿ

Published On :

ಗದಗ: ದಲಿತ ಸಂಘರ್ಷ ಸಮಾನತಾ ಸಮಿತಿಯು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಎಲ್ಲರೂ ಪರಸ್ಪರ ಸಹಕಾರ ಮನೋಭಾವನೆಯಿಂದ ಸಮಾಜದ ಅಭಿವೃದ್ಧಿಗೆ ಶ್ರಮಿಸಿ ಎಂದು ಗದಗ ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ದೊಡ್ಡಮನಿ ಹೇಳಿದರು.
ಗದಗ ಜಿಲ್ಲಾ ದಲಿತ ಸಂಘರ್ಷ ಸಮಾನತಾ ಸಮಿತಿಯಿಂದ ಗುರುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ದಲಿತರು ಎಲ್ಲರಂತೆ ಸಮಾನರಾಗಿ ಬಾಳಬೇಕು. ಇದಕ್ಕಾಗಿ ಸರ್ಕಾರವು ಹಲವು ಯೋಜನೆಗಳನ್ನು ನೀಡುತ್ತಿದೆ. ಸಮಾಜ ಬಾಂಧವರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಪಸಂಖ್ಯಾತರಿಗೆ ನಿಗಮದಿಂದ ಸಿಗುವ ಸೌಲಭ್ಯ ದೊರಕಿಸಿಕೊಡುವುದಾಗಿ ಹೇಳಿದರು. ಸಮಿತಿ ಜಿಲ್ಲಾಧ್ಯಕ್ಷ ಸಿದ್ದು ಹಾದಿಮನಿ ಅಲ್ಪಸಂಖ್ಯಾತರ ಸಮಾಜದ ಸಮಸ್ಯೆ ವಿವರಿಸಿದರು. ಜಿಲ್ಲಾ ಉಪಾಧ್ಯಕ್ಷ ವಿನಾಯಕ ಹಾದಿಮನಿ, ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಮಣ್ಣಮ್ಮನವರ, ಸಹಕಾರ್ಯದರ್ಶಿ ಪ್ರಕಾಶ ಹೊಸಳ್ಳಿ, ಖಜಾಂಜಿ ರಾಘವೇಂದ್ರ ಹಾದಿಮನಿ, ಸಂಘಟನಾ ಕಾರ್ಯದರ್ಶಿ ಪ್ರಧಾನಿ ಹಾದಿಮನಿ, ಪದಾಧಿಕಾರಿಗಳು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.