ಅಭಿವೃದ್ಧಿಗಾಗಿ ಹಾವಿನಾಳ ಬೆಂಬಲಿಸಿ: ಕಳಕಪ್ಪ ಬಂಡಿ
ಮುಂಡರಗಿ: ಜಿಪಂ ಸದಸ್ಯರಾಗಿ 2 ವರ್ಷ 3 ತಿಂಗಳ ಅವಧಿಯಲ್ಲಿ ಉತ್ತಮ ಕಾರ್ಯ ಮಾಡುವ ಮೂಲಕ ಜನಪರತೆಗೆ ಹೆಸರಾಗಿರುವ ಹೇಮಗಿರೀಶ ಹಾವಿನಾಳ ಅವರನ್ನು ಆಯ್ಕೆ ಮಾಡುವ ಮೂಲಕ ಮತ್ತೊಮ್ಮೆ ಸೇವೆಗೆ ಅಣಿಗೊಳಿಸಬೇಕು ಎಂದು ಮಾಜಿ ಸಚಿವ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕಳಕಪ್ಪ ಬಂಡಿ ಹೇಳಿದರು.
ಅವರು ತಾಲೂಕಿನ ಕಲಕೇರಿ ಗ್ರಾಮದಲ್ಲಿ ಗುರುವಾರ ಅಂದಪ್ಪ ಮೇಟಿ, ಶಂಕ್ರಪ್ಪ ದೇಸಾಯಿ, ಪರಮೇಶಪ್ಪ ಮೇಟಿ ಸೇರಿದಂತೆ ಅನೇಕರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು. ಈ ಭಾಗದ ಜನತೆಗೆ ಬೇಕಾದ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಹಾವಿನಾಳ ಯಶಸ್ವಿಯಾಗಿದ್ದಾರೆ. ಜನತೆ ಅವರನ್ನು ಬೆಂಬಲಿಸುವಂತೆ ತಿಳಿಸಿದರು. ಈ ಹಿಂದೆ ಬಿಜೆಪಿ ಸರ್ಕಾರ ಭಾಗ್ಯಲಕ್ಷ್ಮಿ, ಬೈಸಿಕಲ್, ರೈತರಿಗಾಗಿ ರು. 10 ಸಾವಿರ ನೀಡುವ ಸುವರ್ಣಭೂಮಿ ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿದೆ ಎಂದು ಆರೋಪಿಸಿದರು. ಬಿಜೆಪಿ ಅಭ್ಯರ್ಥಿ ಹೇಮಗಿರೀಶ ಹಾವಿನಾಳ ಮಾತನಾಡಿ, ನಾನು ಈ ಹಿಂದೆ ಮಾಡಿದ ಕೆಲಸಗಳು ತಮಗೆಲ್ಲ ಗೊತ್ತಿವೆ. ಇನ್ನೊಮ್ಮೆ ನಿಮ್ಮೆಲ್ಲರ ಹಾಗೂ ಈ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲು ಮತ ಹಾಕುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದರು.
ರಂಗಪ್ಪ ಕ್ಯಾದಿಗಿಹಳ್ಳಿ, ಕುಮಾರಸ್ವಾಮಿ ಹಿರೇಮಠ, ಅಂದಪ್ಪ ಮೇಟಿ ಮಾತನಾಡಿದರು. ಕರಬಸಪ್ಪ ಹಂಚಿನಾಳ, ಬೀರಪ್ಪ ಬಂಡಿ, ಸೀತಾರಾಮರಾಜು, ಎಸ್.ವಿ. ಪಾಟೀಲ, ಮುದ್ಲಿಂಗಪ್ಪ ಕೊರ್ಲಹಳ್ಳಿ, ದೊಡ್ಡನಿಂಗಪ್ಪ ಮಡೇಹೊಲದ, ಮಲ್ಲಿಕಾರ್ಜುನ ಬಹದ್ದೂರದೇಸಾಯಿ, ರಾಜಶೇಖರ ಮೇಟಿ, ಮದರ್‌ಸಾಬ್ ಸಿಂಗನಮಲ್ಲಿ, ರಜನೀಕಾಂತ ದೇಸಾಯಿ, ಬಸವರಾಜ ಮುಂಡವಾಡ, ಪರಮೇಶಪ್ಪ, ಸುರೇಶ ಮಾಳೆಕೊಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಅನೇಕರು ಬಿಜೆಪಿಗೆ ಸೇರ್ಪಡೆಗೊಂಡರು. ರಮೇಶ ಹುಳಕನ್ನವರ ನಿರೂಪಿಸಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

