ಸಮಾಜದ ಸ್ವಾಸ್ಥ್ಯ ಕಾಪಾಡುವದು ಅವಶ್ಯ: ರೇಷ್ಮಾ ದೇಸಾಯಿ
ಕನ್ನಡಪ್ರಭ ವಾರ್ತೆ, ರೋಣ, ಸೆ. 26
ನೈತಿಕ ಮತ್ತು ಮಾನವೀಯ ಮೌಲ್ಯಗಳು ಅಧಃಪತನ ಹೊಂದುತ್ತಿರುವ ಪ್ರಸ್ತುತ ದಿನದಲ್ಲಿ ಜನತೆ ಸುಸಂಸ್ಕೃತರಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವದು ಅಗತ್ಯವಾಗಿದೆ ಎಂದು ಏಡ್ಸ್ ಕಾಯಿಲೆ ನಿಯಂತ್ರಣ ಆಪ್ತ ಸಮಾಲೋಚಕಿ ರೇಷ್ಮಾ ದೇಸಾಯಿ ಹೇಳಿದರು.
ಅವರು ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಗುರುವಾರ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ಶಿಕ್ಷಣ ಇಲಾಖೆ, ಸಹಾಯಕ ಸರ್ಕಾರಿ ಅಭಿಯೋಜಕರ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರೋಣ ಇವರುಗಳ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಕಾನೂನು ಸಾಕ್ಷರತಾ ಮತ್ತು ಎಚ್ಐವಿ ನಿಯಂತ್ರಣಕ್ಕೆ ಸರ್ಕಾರದ ವೈದ್ಯಕೀಯ ಸೌಲಭ್ಯಗಳ ಕುರಿತು ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರ ಏಡ್ಸ್ ಹರಡದಂತೆ ಮತ್ತು ನಿಯಂತ್ರಣಕ್ಕೆ ಅನೇಕ ವೈದ್ಯಕೀಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಿದೆ. ಅವುಗಳ ಕುರಿತು ಜನತೆ ತಿಳಿದುಕೊಳ್ಳಬೇಕು. ಏಡ್ಸ್ ಬರದಂತೆ ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು. ಅಗತ್ಯ ಸಲಹೆ ಬೇಕಾದಲ್ಲಿ ಸಮೀಪದ ತಾಲೂಕು ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಬೇಕು. ಏಡ್ಸ್ ನಿಯಂತ್ರಣಕ್ಕೆ ಔಷಧಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಸಿಗಲಿವೆ ಎಂದರು.
ಕಿರಿಯ ಸಿವಿಲ್ ನ್ಯಾಯಾಧೀಶ ಎಂ.ಸಿ. ನಂಜೇಗೌಡ ಮುಂತಾದವರು ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಜಿ.ಡಿ. ಮಹಾವರಕರ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಹಿರಿಯ ನ್ಯಾಯಾವಾದಿ ಎಸ್.ಬಿ. ಪಾಟೀಲ ಮಾತನಾಡಿದರು. ಸರ್ಕಾರಿ ಅಭಿಯೋಜಕ ನಾರಾಯಣ ಆರಿ, ವೈ. ಡಿ. ನದಾಫ, ವಿ.ಡಿ. ಪವಾಸ್ಕರ, ವಿ.ಎಸ್. ಬಂಗಾರಿ, ಎಸ್.ಎ. ಅರಹುಣಸಿ, ಎಚ್.ಎಫ್. ಕಾಡದೇವರಮಠ, ಹನಮನಾಳ, ಕಟ್ಟಿ ಮುಂತಾದವರು ಇದ್ದರು. ಎಲ್.ಎನ್. ಬಾಣದ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

