ವಾಲ್ಮೀಕಿ ಸಮಾಜದ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಮುಂಡರಗಿ: ಮತದಾರರು ಬಡವರ ಹಾಗೂ ದೀನದಲಿತರ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂದು ಶಾಸಕ ರಾಮಕೃಷ್ಣ ದೊಡ್ಡಮನಿ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಬಿ.ಎಂ.ತಿಮ್ಮಾಪುರ, ಬಾಲಣ್ಣ ರ್ಯಾವಣಕಿ, ರಾಮಣ್ಣ ಕೋಳಿಯವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ನಂತರ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
50 ವರ್ಷದಲ್ಲಿ ಹಿಂದಿನ ಸರ್ಕಾರಗಳು ಮಾಡದಿರುವ ಅಭಿವೃದ್ಧಿ ಕಾರ್ಯಗಳನ್ನು ನಾವು ಕೇವಲ 5 ವರ್ಷದಲ್ಲಿ ಮಾಡಿ ಮುಗಿಸುತ್ತೇವೆ ಎನ್ನುವ ಮಾತುಗಳನ್ನು ಹೇಳಿ ಈ ಹಿಂದೆ ಆಡಳಿತ ನಡೆಸಿದ ಯಾವುದೇ ಸರ್ಕಾರ ಮಾಡದಿರುವಷ್ಟು ಭ್ರಷ್ಟಾಚಾರ ಮಾಡಿ ರಾಜ್ಯದಲ್ಲಿ ಬಿಜೆಪಿ ಮೂಲೆಗುಂಪಾಗಿದೆ. ಇದೆಲ್ಲವನ್ನು ಅರಿತ ಮತದಾರರು ಸೆ. 29ರಂದು ಜರುಗುವ ಹಮ್ಮಿಗಿ ಜಿಪಂ ಉಪ ಚುನಾವಣೆಯಲ್ಲಿ ಬಡವರ ಹಾಗೂ ದೀನದಲಿತರ ಪಕ್ಷವಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರುದ್ರಗೌಡ ಪಾಟೀಲಗೆ ಮತ ನೀಡಲಿದ್ದಾರೆ. ಸೆ. 29ರಂದು ಜರುಗುವ ಹಮ್ಮಿಗಿ ಜಿಪಂ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಪಕ್ಷದ ಎಲ್ಲ ಮುಖಂಡರ ನೇತೃತ್ವದಲ್ಲಿ ಕ್ಷೇತ್ರದಾದ್ಯಂತ ಸಂಚರಿಸಿ ಮತದಾರರಿಗೆ ಮನವಿ ಮಾಡಿದ್ದು, ಮತದಾರರು ಕಾಂಗ್ರೆಸ್ ಅಭ್ಯರ್ಥಿಯ ಪರ ಹೆಚ್ಚು ಒಲವು ತೋರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಹಮ್ಮಿಗಿ ಕ್ಷೇತ್ರದ ಅಭಿವೃದ್ಧಿಗಾಗಿ ತಾವೂ ಸಹ ಹೆಚ್ಚು ಕಾಳಜಿ ವಹಿಸುವುದಾಗಿ ತಿಳಿಸಿದರು. ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೇಮಂತಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಕೊಟ್ರೇಶ ಅಂಗಡಿ, ವಿಜಯಕುಮಾರ ಶಿಳ್ಳಿನ, ಅಭ್ಯರ್ಥಿ ರುದ್ರಗೌಡ ಪಾಟೀಲ, ರಾಮು ಕಲಾಲ, ಡಾ. ಬಿ.ಎಸ್.ಮೇಟಿ, ಎಸ್.ಡಿ. ಮಕಾಂದಾರ, ಚಂದ್ರಹಾಸ ಉಳ್ಳಾಗಡ್ಡಿ, ಸುರೇಶ ಮಾಗಡಿ, ಡಾ. ಎಲ್.ಡಿ. ಕಲ್ಲುಕುಟಗರ್, ಅಬ್ದುಲ್ ಖುರೇಷಿ, ರಾಮಚಂದ್ರ ಬದಾಮಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

