ಇಂದು ಹಮ್ಮಿಗಿ ಜಿಪಂ ಉಪ ಚುನಾವಣೆ
ಮುಂಡರಗಿ: ತಾಲೂಕಿನ ಹಮ್ಮಿಗಿ ಜಿಪಂ ಉಪಚುನಾವಣೆಯು ಸೆ.29ರಂದು ಜರುಗಲಿದ್ದು, ಅದಕ್ಕಾಗಿ ತಾಲೂಕು ತಹಸೀಲ್ದಾರರು ಎಲ್ಲ ರೀತಿಯ ತಯಾರಿ ಪೂರ್ಣಗೊಳಿಸಿದ್ದು, ಭಾನುವಾರ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯ ವರೆಗೆ ಮತದಾನ ಜರುಗಲಿದೆ. ಒಟ್ಟು 33 ಮತಗಟ್ಟೆಗಳನ್ನು ತೆರೆಯಲಾಗಿದ್ದು, 23 ಅತಿಸೂಕ್ಷ್ಮ, 10 ಸೂಕ್ಷ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಚುನಾವಣಾ ಕಾರ್ಯಕ್ಕಾಗಿ ಒಟ್ಟು144 ಜನ ವಿವಿಧ ಇಲಾಖೆಯ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಮತಕ್ಷೇತ್ರದಲ್ಲಿ ಒಟ್ಟು 23826 ಜನ ಮತದಾರರಿದ್ದು, ಅದರಲ್ಲಿ 12383 ಜನ ಪುರುಷ ಮತದಾರರು, 11443 ಮಹಿಳಾ ಮತದಾರರಿದ್ದಾರೆ. ಹಮ್ಮಿಗಿ ಜಿಪಂ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.
ಇಂದು ಶಿಕ್ಷಕರ ದಿನಾಚರಣೆ
ಗದಗ: ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಜಿಲ್ಲಾ ಘಟಕ ವತಿಯಿಂದ 8ನೇ ವರ್ಷದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸೆ. 29ರ ಬೆಳಗ್ಗೆ 11.30 ಗಂಟೆಗೆ ನಗರದ ಜ. ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನ್ನಿಧ್ಯವನ್ನು ಗಜೇಂದ್ರಗಡದ ಮೈಸೂರು ಮಠದ ಜ. ವಿಜಯಮಹಾಂತ ಶ್ರೀಗಳು ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು. ಕರವೇ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಸೋಂಪುರ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಶಾಸಕ ಬಿ.ಆರ್. ಯಾವಗಲ್, ಜಿ.ಎಸ್. ಪಾಟೀಲ, ರಾಮಕೃಷ್ಣ ದೊಡ್ಡಮನಿ, ಎನ್.ಎಚ್. ಕೋನರೆಡ್ಡಿ, ಎಸ್ಪಿ ಡಾ. ಎಸ್.ಡಿ. ಶರಣಪ್ಪ, ಜಿಪಂ ಅಧ್ಯಕ್ಷ ಎಂ.ಎಸ್. ಪಾಟೀಲ, ಶ್ರೀಕಾಂತ ಖಟವಟೆ, ರಾಜು ಕುರಡಗಿ, ವಿದ್ಯಾಧರ ದೊಡ್ಡಮನಿ, ರಾಜು ನಾಯಕ, ಐ.ಬಿ. ಬೆನಕೊಪ್ಪ, ಎಸ್.ಎಸ್. ಗುದ್ಲಾನೂರ, ಎಸ್.ಎಸ್. ಪಟ್ಟಣಶೆಟ್ಟಿ, ರಮೇಶ ಬದನೂರ ಆಗಮಿಸುವರು. ಇದೇ ಸಂದರ್ಭದಲ್ಲಿ ಬಿ.ಜಿ. ಅಣ್ಣಿಗೇರಿ ಗುರುಗಳು ಸೇರಿದಂತೆ ಜಿಲ್ಲಾಮಟ್ಟದ ಶಿಕ್ಷಕರನ್ನು ಸನ್ಮಾನಿಸಲಾಗುವುದು ಎಂದು ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾಳೆ ಕಾರ್ಯಾಗಾರ
ಗದಗ: ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಹಾವಿದ್ಯಾಲಯದ ಕನ್ನಡ ಸಂಘ ಮತ್ತು ಗದಗ ಜಿಲ್ಲಾ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ಸೆ. 30ರಂದು ಬೆಳಗ್ಗೆ 11ಕ್ಕೆ ಕನ್ನಡ ಭಾಷಾ ಅಭಿವೃದ್ಧಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಪ್ರಾ. ಬಿ.ಡಿ. ಗೌಡರ ಅಧ್ಯಕ್ಷತೆ ವಹಿಸುವರು. ಪ್ರೊ. ಆರ್.ಎಲ್. ಪೊಲೀಸ್ಪಾಟೀಲ ಅವರು ಬರವಣಿಗೆಯ ಕಲೆ ಕುರಿತು ಉಪನ್ಯಾಸ ನೀಡುವರು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

