ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಬೆಳೆಸಲು ಶ್ರಮಿಸಲಿ
ಕನ್ನಡಪ್ರಭ ವಾರ್ತೆ, ಗದಗ, ಸೆ. 29
ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಬೆಳೆಸುವ ಮೂಲಕ ಶಿಕ್ಷಕರು ಸಂಸ್ಕೃತಿ ಉಳಿವಿಗೆ ಶ್ರಮಿಸಲಿ ಎಂದು ನವಲಗುಂದ ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಭಾನುವಾರ ನಗರದ ಜ. ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ 8ನೇ ವರ್ಷದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಶಿಕ್ಷಣದ ಮಹತ್ವ ಸಾರುವ ಕಾರ್ಯ ನಿರಂತರವಾಗಿ ನಡೆಯಬೇಕಿದ್ದು, ಸಮಾಜಕ್ಕೆ ಗುರುವಿನ ಮಹತ್ವ ತಿಳಿಸುವ ಮೂಲಕ ಶೈಕ್ಷಣಿಕ ಕೈಂಕರ್ಯ ಸತತವಾಗಿ ಸಾಗಬೇಕಿದೆ. ರಾಜ್ಯ ಸರ್ಕಾರದ ಇತ್ತೀಚಿನ ಕೆಲ ಆದೇಶಗಳಿಂದಾಗಿ ಶಿಕ್ಷಕ ಸಮುದಾಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಪ್ರಾಂಜಲ ಮನದಿಂದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಬೋಧಿಸಬೇಕಾದ ಶಿಕ್ಷಕ ವರ್ಗ ಇಂದು ಹೋರಾಟ ಮನೋಭಾವನೆ ರೂಢಿಸಿಕೊಳ್ಳಬೇಕಾದ ಅನಿವಾರ್ಯ ಸಂದಿಗ್ಧತೆ ಎದುರಿಸುತ್ತಿದೆ ಎಂದರು.
ಕನ್ನಡಪರ ಹೋರಾಟಗಳ ಮೂಲಕ ರಾಜ್ಯದಲ್ಲಿ ತನ್ನದೆಯಾದ ಪ್ರಾಮುಖ್ಯತೆ ಹೊಂದಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ ನೆಲ, ಜಲ, ಭಾಷೆ ಸಂರಕ್ಷಣೆಯೊಂದಿಗೆ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಪ್ರಶಂಸನೀಯ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಬಿ.ಜಿ. ಅಣ್ಣಿಗೇರಿ ಗುರುಗಳನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ 70ಕ್ಕೂ ಅಧಿಕ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಗಜೇಂದ್ರಗಡ ಮೈಸೂರು ಮಠದ ವಿಜಯಮಹಾಂತ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಕರವೇ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಸೋಂಪುರ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶ್ರೀಕಾಂತ ಖಟವಟೆ, ವಿದ್ಯಾಧರ ದೊಡ್ಡಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ, ಎಸ್.ಎಸ್. ಗುಡ್ಲಾನೂರ, ಧಾರವಾಡ ಜಿಲ್ಲಾ ಕರವೇ ಅಧ್ಯಕ್ಷ ರಮೇಶ ಬದ್ನೂರ, ಎಸ್.ಎನ್. ಬಳ್ಳಾರಿ ಪಾಲ್ಗೊಂಡಿದ್ದರು. ಕರವೇ ಜಿಲ್ಲಾಧ್ಯಕ್ಷ ಹನುಮಂತ ಅಬ್ಬಿಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

