ಕಾಂಗ್ರೆಸ್ನಿಂದ ಸುಭದ್ರ ರಾಷ್ಟ್ರ
ಹಿರೇಕೆರೂರು: ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕಾಂಗ್ರೆಸ್ಗೆ ಮತ ನೀಡಬೇಕೆಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಪಟ್ಟಣದ ಗುರುಭವನದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ ಪರ ಪ್ರಚಾರ ಸಭೆ ಹಾಗೂ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ರು. 1ಕ್ಕೆ ಕೆಜಿ ಅಕ್ಕಿ, ಹಾಗೂ ಹಾಲಿಗೆ ರು. 4 ಪ್ರೋತ್ಸಾಹಧನ ನೀಡುವ ಮೂಲಕ ಜನಪರ ಕೆಲಸಗಳನ್ನು ಮಾಡಿದೆ. ನರೇಂದ್ರ ಮೋದಿಯವರ ಮೋಡಿ ಕರ್ನಾಟಕದಲ್ಲಿ ನಡೆಯುವುದಿಲ್ಲ. ದೇಶದ ರಕ್ಷಣೆ ಕಾಂಗ್ರೆಸ್ದಿಂದ ಸಾಧ್ಯ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತೆ ಕಾರ್ಯಕರ್ತರು ಶ್ರಮಿಸಬೇಕೆಂದರು.
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಮಾತನಾಡಿ, 8 ವರ್ಷಗಳಿಂದ ಬಡವರಿಗೆ ಸಹಾಯ ಮಾಡುವ ಉದ್ದೇಶ ಹಾಗೂ ಕ್ಷೇತ್ರದ ಅಭಿವೃದ್ಧಿ ಕನಸನ್ನು ಇಟ್ಟುಕೊಂಡಿದ್ದೇನೆ. ಇದೊಂದು ಬಾರಿ ನಿಮ್ಮ ಸೇವೆ ಮಾಡಲು ಅವಕಾಶ ಕೊಡಿ. ಈ ಕ್ಷೇತ್ರದ ಋಣ ತೀರಿಸಲು ಬದ್ಧನಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ವಿವಿಧ ಪಕ್ಷಗಳಿಂದ ಕಾಂಗ್ರೆಸ್ಗೆ ಸೇರ್ಪಡೆಗೊಂಡ ಮಾಜಿ ಶಾಸಕರಾದ ಬಿ.ಎಚ್.ಬನ್ನಿಕೋಡ, ಡಿ.ಎಂ. ಸಾಲಿ, ಮುಖಂಡರಾದ ಅಶೋಕ ಪಾಟೀಲ ಮಾತನಾಡಿ, ಕಾಂಗ್ರೆಸ್ನ ತತ್ವ ಸಿದ್ಧಾಂತಗಳ, ಜನಪರ ಆಡಳಿತ, ಬಡವರ ಬಗ್ಗೆ ಅನುಕಂಪ, ರೈತರ ಹಿತರಕ್ಷಣೆಗೆ ಸ್ಪಂದನೆ, ಉತ್ತಮ ಆಡಳಿತಕ್ಕೆ ತಲೆಬಾಗಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದರು. ಮಾಜಿ ಶಾಸಕ ಬಿ.ಸಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ರುದ್ರಪ್ಪ ಲಮಾಣಿ, ಕೆ.ಬಿ. ಕೋಳಿವಾಡ, ಎಸ್.ಆರ್. ಮಾನೆ, ಬಸವರಾಜ ಶಿವಣ್ಣನವರ ಮಾತನಾಡಿದರು. ಪಪಂ ಅಧ್ಯಕ್ಷೆ ಶಿವಲೀಲಾ ಎಸ್.ಆರ್., ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಬಾಳಿಕಾಯಿ. ಆರ್.ಎನ್. ಗಂಗೋಳ, ಬಸವಂತಪ್ಪ ದೊಡ್ಡಮನಿ, ಡಿ.ಸಿ. ಪಾಟೀಲ, ಎಸ್.ಕೆ. ಕರಿಯಣ್ಣನವರ, ಜಿ.ಶಿವನಗೌಡ, ಎಸ್.ಬಿ. ತಿಪಣ್ಣನವರ, ಜ್ಞಾನೇಶ್ವರ ಅಬಲೂರ, ಸುರೇಶ ಮಡಿವಾಳರ, ದುರ್ಗಪ್ಪ ನಿರಲಗಿ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪಟ್ಟಣದ ಜಿ.ಬಿ. ಶಂಕರರಾವ್ ವೃತ್ತದಿಂದ ಆರಂಭಗೊಂಡ ರೋಡ್ ಶೋ ಚಾವಡಿ ವೃತ್ತದ ಮೂಲಕ ಗುರುಭವನದವರೆಗೆ ಅದ್ಧೂರಿಯಾಗಿ ನಡೆಯಿತು.
8 ವರ್ಷಗಳಿಂದ ಬಡವರಿಗೆ ಸಹಾಯ ಮಾಡುವ ಉದ್ದೇಶ ಹಾಗೂ ಕ್ಷೇತ್ರದ ಅಭಿವೃದ್ಧಿ ಕನಸನ್ನು ಇಟ್ಟುಕೊಂಡಿದ್ದೇನೆ. ಇದೊಂದು ಬಾರಿ ನಿಮ್ಮ ಸೇವೆ ಮಾಡಲು ಅವಕಾಶ ಕೊಡಿ.
-ಸಲೀಂ ಅಹ್ಮದ್
ಕಾಂಗ್ರೆಸ್ ಅಭ್ಯರ್ಥಿ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

