ಕಾಂಗ್ರೆಸ್ ತಿರಸ್ಕರಿಸಿ: ಮಹಾಂತಶೆಟ್ಟರ
ಶಿರಹಟ್ಟಿ: ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ತಮ್ಮ ಗುರಿ ಎಂದು ಹೇಳುತ್ತಾ ಅವರ ಮತ ಪಡೆದು ಅವರನ್ನು ನಿರ್ಲಕ್ಷಿಸುತ್ತಿರುವ ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಬೇಕು ಎಂದು ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ ಹೇಳಿದರು.
ಅವರು ಬುಧವಾರ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಹಾವೇರಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದರು. ರಾಜ್ಯದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಬೇಕು. ಮತದಾನ ಮಾಡುವುದಕ್ಕಿಂತ ಮೊದಲು ನಾವು ಮತ ಹಾಕುತ್ತಿರುವ ಅಭ್ಯರ್ಥಿ ಬಗ್ಗೆ ತಿಳಿದುಕೊಳ್ಳಿ. ಕೇಂದ್ರದ ಯುಪಿಎ ಸರ್ಕಾರದ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಬೆಲೆ ಏರಿಕೆ, ಬಡತನ, ಯುವಕರಿಗೆ ನಿರುದ್ಯೋಗ ಇವೇ ಈ ಸರ್ಕಾರದ ಸಾಧನೆಗಳಾಗಿವೆ. ದೇಶದ ಅಭಿವೃದ್ಧಿ ಕ್ಷೀಣಿಸುತ್ತಿದ್ದು, ದೇಶದಲ್ಲಿಯೇ ಮಹತ್ತರ ಬದಲಾವಣೆ ತರುವ ಚುನಾವಣೆ ಇದಾಗಬೇಕು. ಸಂಸತ್ನಲ್ಲಿ ಜನರ ಪರ ಧ್ವನಿಯಾಗಿ ಕಾರ್ಯ ಮಾಡುವ ಅಭ್ಯರ್ಥಿಯನ್ನು ಗುರುತಿಸಿ ಆಯ್ಕೆ ಮಾಡುವುದು ಮತದಾರರ ಕೈಯಲ್ಲಿದೆ ಎಂದರು.
ಮಾಜಿ ಶಾಸಕ ರಾಮಣ್ಣ ಲಮಾಣಿ, ಜಿಪಂ ಸದಸ್ಯ ಎಂ.ಎಸ್. ದೊಡ್ಡಗೌಡರ, ಗ್ರಾಪಂ ಅಧ್ಯಕ್ಷ ತಿಮ್ಮರಡ್ಡಿ ಮರಡ್ಡಿ, ಸದಸ್ಯ ಮೋಹನ್ ಗುತ್ತೆಮ್ಮನವರ, ಶಿದ್ರಾಮಪ್ಪ ಮೊರಬದ, ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಜಾನು ಲಮಾಣಿ, ವಿ.ವಿ. ಕಪ್ಪತ್ತನವರ, ರಾಮಣ್ಣ ಡಂಬಳ, ಚಂದ್ರಕಾಂತ ನೂರಶೆಟ್ಟರ, ತಿಪ್ಪಣ್ಣ ಕೊಂಚಿಗೇರಿ, ಬಸಲಿಂಗಪ್ಪ ಕಪ್ಪತ್ತನವರ, ಅಶೋಕ ಪಲ್ಲೇದ, ಶಂಕ್ರಣ್ಣ ಕಾಳೆ, ಚಂಬಣ್ಣ ಬಾಳಿಕಾಯಿ, ವೀರಣ್ಣ ಹತ್ತಿಕಾಳ, ವೀರಣ್ಣ ಕೊಡ್ಲಿವಾಡ, ಬಿ.ಡಿ. ಪಲ್ಲೇದ, ಬಿ.ಎಂ. ಮಂಡಣ್ಣವರ, ರಾಜು ಹಲಗಲಿ, ಮಹಾಂತೇಶ ಹಳ್ಳೆಪ್ಪನವರ, ಗಂಗಮ್ಮ ಅಂಗಡಿ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

