ಬಿಜೆಪಿ ಬಿರುಸಿನ ಪ್ರಚಾರ
ಹಾವೇರಿ: ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿ ಶಿವಕುಮಾರ ಉದಾಸಿಯವರ ಪರವಾಗಿ ನಗರದ ಯಾಲಕ್ಕಿ ಓಣಿ, ಕಲ್ಲುಮಂಟಪ ರಸ್ತೆ, ಅಕ್ಕಿ ಪೇಟೆ, ಹೊಸನಗರದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಬಿರುಸಿನ ಪ್ರಚಾರ ಕೈಗೊಂಡರು.
ನಗರ ಘಟಕದ ಅಧ್ಯಕ್ಷ ಗುಡ್ಡನಗೌಡ್ರ ಅಂದಾನಿಗೌಡ್ರ ಮಾತನಾಡಿ, ರಾಜ್ಯ ಹಾಗೂ ದೇಶದಲ್ಲಿ ಅಭಿವೃದ್ಧಿ ಪರ ಪಕ್ಷವೆಂದರೆ ಅದು ಬಿಜೆಪಿ ಮಾತ್ರ. ಹಿಂದಿನ ಅವಧಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮಾಡಿರುವಂತಹ ಅಭಿವೃದ್ಧಿ ಕಾರ್ಯಗಳು, ಬಡ, ದೀನ ದಲಿತರ, ರೈತರ ಪರವಾಗಿ ರೂಪಿಸಿರುವ ಯೋಜನೆಗಳೇ ಇದಕ್ಕೆ ಸಾಕ್ಷಿ. ಯಡಿಯೂರಪ್ಪ, ಸದಾನಂದಗೌಡ, ಜಗದೀಶ ಶೆಟ್ಟರ ಮುಖ್ಯಮಂತ್ರಿಯಾಗಿದ್ದಾಗ ಕೃಷಿ ಬಜೆಟ್ ಮಂಡಣೆ, ಸಾಲ ಮನ್ನಾ, ಬಡ್ಡಿ ಮನ್ನಾ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಮಾಡಿದೆ. ಈಗ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಯೋಜನೆಗಳಿಗೆ ಅನುದಾನ ನೀಡದೇ ಅಭಿವೃದ್ಧಿ ಕುಂಠಿತಗೊಳ್ಳುವಂತೆ ಮಾಡಿದೆ ಎಂದು ಆರೋಪಿಸಿದರು. ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ನಗರಸಭಾ ಸದಸ್ಯರಾದ ಸುರೇಶ ದೊಡ್ಡಮನಿ, ಶಿವಬಸವ ವನ್ನಳ್ಳಿ, ಲಲಿತಾ ಗುಂಡೇನಹಳ್ಳಿ, ಹನುಮಂತ ನಾಯಕ ಬದಾಮಿ, ನಿರಂಜನ ಹೇರೂರ, ಹನುಮಂತಪ್ಪ ದೇವಗಿರಿ, ಜಗದೀಶ ಮಲಗೋಡ, ಕರಬಸಪ್ಪ ಹಳದೂರ, ನಜಗುನ್ನಿಸಾ ನಧಾಪ, ರೇಣುಕಾ ಪೂಜಾರ, ಗೀತಾ ಜುಜಗಾಂವ, ಸತೀಶ ಹಾವೇರಿ, ಪರಶುರಾಮ ಮೈಲಾರಪ್ಪನವರ, ಯಲ್ಲವ್ವ ಬೆಂಗಳೂರ, ಇರ್ಫಾನ್ ಪಠಾಣ. ಗಂಗವ್ವ ಏರೇಶಿಮಿ, ಅಲ್ಲಾಭಕ್ಷ ತಿಮ್ಮಾಪುರ, ಮಂಜುನಾಥ ಪುತಳೆಕರ, ವೇದವ್ಯಾಸ ಕಟ್ಟಿ, ಶಿವಲಿಂಗಪ್ಪ ಕಲ್ಯಾಣಿ, ಹನುಮಂತಪ್ಪ ನುಕಾಪುರ, ಪ್ರದೀಪ ಮುಳ್ಳೂರ, ವೇಂಕಟೇಶ ದೈವಜ್ಞ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಕರಬಸಮ್ಮನವರ, ವೀರಪ್ಪ ನಂದಿ, ಸತೀಶ ಕೋರಿಶೆಟ್ಟರ್, ಜ್ಯೋತಿ ಸಾತೇನಹಳ್ಳಿ, ಜಗದೀಶ ಸವಣೂರ, ಇಕಲಾಕ ಮುರಟಗಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

