ಗದಗ

ಮೋದಿ ಅಲೆ ನೆಲಕಚ್ಚಲಿದೆ: ಎಚ್ಕೆ

Published On :

ಗಜೇಂದ್ರಗಡ: ಕಾಂಗ್ರೆಸ್‌ನ ಜನಪರ ಸಾಧನೆ ಮುಂದೆ ಮಾಧ್ಯಮ ಸೃಷ್ಟಿಯ ಮೋದಿ ಅಲೆ ನೆಲಕಚ್ಚಲಿದೆ. ಹೀಗಾಗಿ ಈ ಬಾರಿಯೂ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆ ಖಚಿತ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಪಟ್ಟಣದ ಕಾಲಕಾಲೇಶ್ವರ ವೃತ್ತದ ಬಳಿ ಗುರುವಾರ ಸಂಜೆ ಹಾವೇರಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಮತ ಯಾಚನೆಯ ಬಹಿರಂಗ ಸಭೆಯಲ್ಲಿ ಮಾತನಾಡಿದರು.ಯುಪಿಎ ಸರ್ಕಾರ ತನ್ನ 10 ವರ್ಷದ ಅಧಿಕಾರವಧಿಯಲ್ಲಿ ವಿಶ್ವವೇ ನಿಬ್ಬೆರಗಾಗುವಂತಹ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ದೇಶದ ಪ್ರತಿ ಪ್ರಜೆಯ ಪ್ರಗತಿಗಾಗಿ ಶ್ರಮಿಸುವ ಜತೆಗೆ ಸರ್ವ ಸಮುದಾಯದ ಅಭಿವೃದ್ಧಿ ಮತ್ತು ಏಕತೆಗೆ ಒತ್ತು ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದರು. ಹಿಂದುಳಿದ ವರ್ಗದ ಮುಖಂಡ ಟಿ. ಈಶ್ವರ ಮಾತನಾಡಿ, ಕಳೇದ ಬಾರಿ ರಾಜ್ಯದಲ್ಲಿ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದನ್ನು ಮಾಡಿದ್ದರಿಂದ ಜನರಿಂದ ತಿರಸ್ಕರಿಸಲ್ಪಟ್ಟಿದೆ. ಯಾವ ಮುಖ ಹೊತ್ತು ಜನರ ಬಳಿ ಮತ ಕೇಳುತ್ತಿದ್ದೀರಾ ಎಂದು ಪ್ರಶ್ನಿಸಿದರು. ಅಭ್ಯರ್ಥಿ ಸಲಿಂ ಅಹ್ಮದ್ ಮಾತನಾಡಿ, ಈ ಬಾರಿ ನನ್ನನ್ನು ಗೆಲ್ಲಿಸಿ ತಮ್ಮ ಸೇವೆಗೆ ಅವಕಾಶ ನೀಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು. ಶಾಸಕ ಜಿ.ಎಸ್. ಪಾಟೀಲ, ಮಾಜಿ ಸಂಸದ ಆರ್.ಎಸ್. ಪಾಟೀಲ, ಅಶೋಕ ಬಾಗಮಾರ, ವೀರಣ್ಣ ಸೊನ್ನದ ಮಾತನಾಡಿದರು. ಕೆಸಿಸಿ ಬ್ಯಾಂಕ್ ಅಧ್ಯಕ್ಷ ಐ.ಎಸ್. ಪಾಟೀಲ, ರವಿ ದಂಡಿನ, ಮಿಥುನ್ ಪಾಟೀಲ, ಸುಭಾನಸಾಬ್ ಆರಗಿದ್ದಿ, ವೀರಣ್ಣ ಶೆಟ್ಟರ, ಪ್ರಭು ಮೇಟಿ, ಪುರಸಭೆ ಸದಸ್ಯೆ ಮಕ್ತುಂಭಿ ಹಣಗಿ, ಸುಜಾತಾ ಚುಂಚಾ, ಶಾರಮ್ಮ ತಳವಾರ, ಶಾರದಾ ರಾಠೋಡ, ಚಂಬಣ್ಣ ಚವಡಿ, ರವಿ ಗಡೇದವರ, ಪಿ. ಸುಬ್ರಮಣ್ಯಂರೆಡ್ಡಿ, ಶ್ರೀಕಾಂತ ಅವಧೂತ, ದತ್ತುಸಾ ಬಾಕಳೆ, ಮುರ್ತುಜಾ ಡಾಲಾಯತ್, ಮಾರುತಿ ಕಲ್ಲೋಡ್ಡರ  ಇದ್ದರು. ಮಡಿವಾಳ ಸಮುದಾಯದ ಹಲವಾರು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.