ಗದಗ

ಭ್ರಷ್ಟಾಚಾರಕ್ಕೆ ಹೊಸ ಅರ್ಥ ಬರೆದ ಬಿಜೆಪಿ

Published On :

ಕನ್ನಡಪ್ರಭ ವಾರ್ತೆ, ಶಿರಹಟ್ಟಿ, ಏ. 5
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ನಡೆಸಿದ ಭ್ರಷ್ಟಾಚಾರದಿಂದ ಜನ ಬೇಸತ್ತಿದ್ದಾರೆ. ಸಂಪತ್ತನ್ನು ಲೂಟಿ ಹೊಡೆದ ಕಳ್ಳರ ಕೈಗೆ ಮತ್ತೆ ಅಧಿಕಾರ ನೀಡಬಾರದು. ಅಭಿವೃದ್ಧಿ ಪರ ಚಿಂತನೆಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿರು ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಮನವಿ ಮಾಡಿದರು.
ಅವರು ಶನಿವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಏರ್ಪಡಿಸಿದ್ದ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಬಹಿರಂಗ ಸಭೆಯಲ್ಲಿ ಮತ ಯಾಚನೆ ಮಾಡಿ ಮಾತನಾಡಿದ ಅವರು, ಕಳೆದ 5 ವರ್ಷದಲ್ಲಿ ರಾಜ್ಯದ ಸಾವಿರಾರು ಕೋಟಿ ಮೌಲ್ಯದ ಸಂಪತ್ತು ಲೂಟಿಯಾಗಿದೆ. ಮಾಜಿ ಮುಖ್ಯಮಂತ್ರಿ, ಸಚಿವರು, ಶಾಸಕರು ಸೇರಿ 15 ಜನ ಜೈಲುವಾಸ ಅನುಭವಿಸಿದ್ದಾರೆ. ಹೇಳುತ್ತಾ ಹೋದರೆ ಭ್ರಷ್ಟರ ಪಟ್ಟಿ ಏರುತ್ತಾ ಹೋಗುತ್ತದೆ. ತಮ್ಮ ಅಧಿಕಾರ ಅವಧಿಯಲ್ಲಾದ ಸಾಧನೆ ಮುಂದಿಟ್ಟುಕೊಂಡು ಮತದಾರರ ಬಳಿ ಮತಕೇಳದೆ, ಮೋದಿ ಮುಖವಾಡ ಮುಂದಿಟ್ಟುಕೊಂಡು ಮತ ಕೇಳುತ್ತಿದ್ದಾರೆ. ಇವರಿಗೆ ಪ್ರಜಾಪ್ರಭುತ್ವದಲ್ಲಿ ವಿಶ್ವಾಸವಿಲ್ಲ. ಆಂತರಿಕ ಕಚ್ಚಾಟ, ಸದನದಲ್ಲಿ ಬ್ಲೂಫಿಲಂ ವೀಕ್ಷಣೆ ಮಾಡಿ ಸದನದ ಘನತೆ ಹಾಳುಮಾಡಿದ್ದಾರೆ. ಕೇಂದ್ರ ಯುಪಿಎ ಸರ್ಕಾರ ಜಾರಿಗೆ ತಂದಿರುವ ಉದ್ಯೋಗ ಖಾತ್ರಿ ಯೋಜನೆ, ಭ್ರಷ್ಟಾಚಾರ ಹತ್ತಿಕ್ಕಲು ಮಾಹಿತಿ ಹಕ್ಕು ಕಾಯ್ದೆ, ಬಡವರಿಗಾಗಿ ಅನ್ನಭಾಗ್ಯ ಯೋಜನೆ, ಶಿಕ್ಷಣ ಹಕ್ಕು ಕಾಯ್ದೆ ಜನೋಪಯೋಗಿ ಆಗಿದೆ. ಇದನ್ನು ತಿಳಿದು ಮತದಾರರು ಕಾಂಗ್ರೆಸ್ ಬೆಂಬಲಿಸಿ ಎಂದರು.
ಅಬಕಾರಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ, ಜಿಲ್ಲಾ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಜಿ.ಎಸ್. ಗಡ್ಡದ್ದೇವರಮಠ, ಶಾಸಕ ರಾಮಕೃಷ್ಣ ದೊಡ್ಡಮನಿ, ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ಎಸ್.ಎನ್. ಪಾಟೀಲ, ವಾಸಣ್ಣ ಕುರಡಗಿ, ಟಿ.ಈಶ್ವರ, ಶಿವಕುಮಾರಗೌಡ ಪಾಟೀಲ ಮಾತನಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣಗೌಡ್ರ ಪಾಟೀಲ, ವೀರಣ್ಣ ಅಂಗಡಿ, ವೈ.ಎಸ್. ಪಾಟೀಲ, ಶಿವಪ್ರಕಾಶ ಮಹಾಜನಶೆಟ್ಟರ, ಎಚ್.ಡಿ. ಮಾಗಡಿ, ಪಿ.ವಿ. ಪರಬ, ಎನ್.ಆರ್. ಕುಲಕರ್ಣಿ, ಸಿ.ಕೆ. ಮುಳಗುಂದ, ಎ.ಎ. ಪಠಾಣ, ಶಿವನಗೌಡ್ರ ಪಾಟೀಲ, ದೇವು ಲಮಾಣಿ, ಚನ್ನಪ್ಪ ಜಗಲಿ, ಬಸಣ್ಣ ಬೆಟಗೇರಿ, ಎಸ್.ಎಸ್. ಗೋಕಾವಿ, ಮಹೇಂದ್ರ ಮುಂಡವಾಡ, ಮಂಜು ಘಂಟಿ, ಮಿನಾಕ್ಷಿ ತಳವಾರ, ವೀರಯ್ಯ ಮಠಪತಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.