ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ
ಗಜೇಂದ್ರಗಡದ ಸ್ಥಳೀಯ ಬಸ್ ನಿಲ್ದಾಣದ ಬಳಿ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಹಾಗೂ ವಿವಿಧ ವಾರ್ಡ್ಗಳಲ್ಲಿ ಸಂಗ್ರಹವಾದ ಕಸದ ಕಂಟೇನರ್ಗಳು ತುಂಬಿ ಚೆಲ್ಲುತ್ತಿವೆ. ನಿಗದಿತ ಸಮಯದಲ್ಲಿ ವಿಲೇವಾರಿ ಮಾಡದ ಪರಿಣಾಮ ಕಸ ಚಲ್ಲಾಪಿಲ್ಲಿಯಾಗಿ ಬಿದ್ದು ಹಂದಿಗಳು ಮುತ್ತಿಕ್ಕಿ ಗಬ್ಬು ವಾಸನೆ ಬೀರುತ್ತಿದೆ. ಕೂಡಲೇ ಕಸ ವಿಲೇವಾರಿಗೆ ಕ್ರಮಕೈಗೊಳ್ಳಬೇಕೆಂದು ಇಲ್ಲಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಿತ್ಯ ಸಾವಿರಾರು ಜನರು ಸಂಚರಿಸುತ್ತಾರೆ. ಜತೆಗೆ ವ್ಯಾಪಾರಸ್ಥರಿಗೆ ಮತ್ತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿ ಸೊಳ್ಳೆಗಳ ತಾಣವಾಗಿ ಮಾರ್ಪಟ್ಟಿದೆ. ಇದರಿಂದ ಸಾಂಕ್ರಮಿಕ ರೋಗಗಳು ಉತ್ಪತ್ತಿಯಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಕಸದ ರಾಶಿಯನ್ನು ಹಂದಿಗಳು ಚೆಲ್ಲಾಡಿ ದಿನದಿಂದ ದಿನಕ್ಕೆ ಕಲುಷಿತವಾತಾವರಣ ಸೃಷ್ಟಿಯಾಗುತ್ತಿದೆ. ಜನತೆ ಮೂಗು ಮುಚ್ಚಿಕೊಂಡು ತಿರುಗಾಡು ಸ್ಥಿತಿ ಬಂದೊದಗಿದೆ.
ಶರವೇಗದಲ್ಲಿ ಬೆಳೆಯುತ್ತಿರುವ ಪಟ್ಟಣದಲ್ಲಿ ಸುತ್ತಲಿನ ಗ್ರಾಮಗಳ ಜನರು ತಮ್ಮ ನಿತ್ಯ ಜೀವನದ ವ್ಯಾಪಾರ ವಹಿವಾಟಿಗಾಗಿ ಪಟ್ಟಣವನ್ನೆ ಅವಲಂಬಿಸಿದ್ದು, ಸ್ಥಳೀಯ ಆಡಳಿತ ಜನತೆಯ ಮೂಲ ಸೌಲಭ್ಯ ನೀಡುವಲ್ಲಿ ಎಡವಿದೆ. ಹೀಗಾಗಿ, ಪಟ್ಟಣದ ಜನತೆ ಒಂದಿಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಗಮನ ಹರಿಸಿ ತ್ಯಾಜ್ಯ ವಿಲೇವಾರಿಯಂತಹ ಮೂಲ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕಿದೆ.
ಟ ಸಿದ್ದು ವೀರಾಪುರ, ಮಹೇಶ ಗಡೇದವರ, ರಮೇಶ ಜುಚನಿ, ಶರಣಯ್ಯ ಹಿರೇಮಠ, ಸ್ಥಳೀಯ ನಿವಾಸಿಗಳು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

