ಸಮೀಕ್ಷೆ ಮೀರಿದ ಫಲಿತಾಂಶ
ಕನ್ನಡಪ್ರಭ ವಾರ್ತೆ, ಗದಗ, ಏ. 6
ಹಲವಾರು ದಿನಗಳಿಂದ ದೇಶಾದ್ಯಂತ ಪ್ರಕಟವಾಗುತ್ತಿರುವ ಸಮೀಕ್ಷೆಗಳನ್ನು ಮೀರಿದ ಫಲಿತಾಂಶವನ್ನು ಕಾಂಗ್ರೆಸ್ ಪಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ವಿಶ್ವಾಸ ವ್ಯಕ್ತ ಪಡಿಸಿದರು.
ಅವರು ಭಾನುವಾರ ನಗರದ 8 ವಿವಿಧ ವಾರ್ಡ್ಗಳಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಮೀಕ್ಷೆಗಳ ಬಗ್ಗೆ ನಮ್ಮ ಪಕ್ಷದ ಕಾರ್ಯಕರ್ತರು ಗೊಂದಲಕ್ಕೆ ಈಡಾಗುವ ಸಾಧ್ಯತೆಯೇ ಇಲ್ಲ. ನಮ್ಮದು ಬೇರು ಮಟ್ಟದಲ್ಲಿ ಅತ್ಯಂತ ಗಟ್ಟಿಯಾದ ಪಕ್ಷವಾಗಿದೆ ಎಂದು ಹೇಳಿದರು.
ಎಷ್ಟೇ ಸಮೀಕ್ಷೆಗಳು ನಡೆದರೂ, ಅವುಗಳನ್ನು ಮೀರಿದ ಫಲಿತಾಂಶವನ್ನು ದೇಶದ ಜನತೆ ನೀಡಲಿದ್ದಾರೆ. ಅದಕ್ಕಾಗಿ ಅವರು ಕಾತುರರಾಗಿದ್ದು, ಎಲ್ಲರ ನಿರೀಕ್ಷೆಗಳನ್ನು ಮೀರಿ ಪಕ್ಷ ಯಶಸ್ಸು ಸಾಧಿಸಲಿದೆ ಎನ್ನುವ ಅಂಶ ಕಾರ್ಯಕರ್ತರ ಬಳಿ ಹೋದಾಗ ನಮಗೆ ತಿಳಿದು ಬಂದಿದೆ. ಹಾವೇರಿ ಕ್ಷೇತ್ರದ ಅಭ್ಯರ್ಥಿ ಸಲೀಂ ಅಹ್ಮದ ಹತ್ತಾರು ವರ್ಷಗಳ ಕಾಲ ಕ್ಷೇತ್ರದ ನಿರಂತರ ಸಂಪರ್ಕ ಹೊಂದಿದ್ದು, ಕ್ಷೇತ್ರದಾದ್ಯಂತ ದೊಡ್ಡ ಯುವಕರ ಪಡೆಯನ್ನೇ ಹೊಂದಿದ್ದಾರೆ. ಅಲ್ಲದೆ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 7 ಕಾಂಗ್ರೆಸ್ ಶಾಸಕರಿದ್ದು, ಎಲ್ಲ ಶಾಸಕರೂ ಈಗಾಗಲೇ ತುರುಸಿನ ಪ್ರಚಾರ ನಡೆಸುತ್ತಿದ್ದಾರೆ. ಮತದಾರರಿಂದಲೂ ಅಷ್ಟೇ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇವಲ ಹಾವೇರಿಯಲ್ಲಿ ಮಾತ್ರವಲ್ಲ, ರಾಜ್ಯಾದ್ಯಂತ ನಮ್ಮ ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಅಭ್ಯರ್ಥಿ ಸಲೀಂ ಅಹ್ಮದ ಮಾತನಾಡಿ, ಹಾಲಿ ಸಂಸದರು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳ ಆಧಾರದಲ್ಲಿ ಮತ ಕೇಳದೇ ಮೋದಿ ಹೆಸರಿನಲ್ಲಿ ಮತ ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮಾಜಿ ಶಾಸಕ ಡಿ.ಆರ್. ಪಾಟೀಲ ಮಾತನಾಡಿದರು. ನಗರಸಭೆ ಸದಸ್ಯ ಬಿ.ಬಿ. ಅಸೂಟಿ, ಎಪಿಎಂಸಿ ಸದಸ್ಯ ಬಾಲಚಂದ್ರ ಭರಮಗೌಡ್ರ, ನಗರಸಭೆ ಮಾಜಿ ಸದಸ್ಯ ಪೀರಸಾಬ ಕೌತಾಳ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

