ಗದಗ

ಹೊಸ ನಾಡ ಕಟ್ಟಲು ಬಿಜೆಪಿಗೆ ಮತ ನೀಡಿ

Published On :

ಹಾವೇರಿ:  ಪ್ರಸಕ್ತ ಲೋಕಸಭಾ ಚುನಾವಣೆ ಬಿಜೆಪಿಗೆ ಪ್ರತಿಷ್ಠಿತ ಚುನಾವಣೆಯಾಗಿದ್ದು, ಮತದಾರರು ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಹಾಗೂ ದೇಶದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮನವಿ ಮಾಡಿದರು.
ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ಶನಿವಾರ ಸಂಜೆ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಮತಯಾಚಿಸಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶದಲ್ಲಿ ಮಹಿಳೆಯರಿಗೆ ಭದ್ರತೆ, ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನರೇಂದ್ರ ಮೋದಿ ಹೊಸ ನಾಡು ಕಟ್ಟಲು ಸನ್ನದ್ಧರಾಗಿದ್ದಾರೆ. ಆದ್ದರಿಂದ ಮತ ಬಾಂಧವರು ಶಿವಕುಮಾರ ಉದಾಸಿಗೆ ಮತ ನೀಡಿ ಗೆಲ್ಲಿಸುವ ಮೂಲಕ ಮೋದಿಯವರ ಕೈಬಲಪಡಿಸಬೇಕು ಎಂದು ಹೇಳಿದರು. ಅಭ್ಯರ್ಥಿ ಶಿವಕುಮಾರ ಉದಾಸಿ ಮಾತನಾಡಿ, ಸಂಸತ್ ಅಧಿವೇಶನದಲ್ಲಿ ಹೆಚ್ಚು ಸಲ ಭಾಗಿಯಾಗಿದ್ದೇನೆ. 84 ಸಮಸ್ಯೆಗಳ ಕುರಿತು ಚರ್ಚಿಸಿದ್ದೇನೆ. ಅಲ್ಲದೇ 2 ಮಸೂದೆಗಳ ಕುರಿತು ಭಾಷಣ ಮಾಡಿದ್ದೇನೆ. ರೈತರ ಸಮಸ್ಯೆಗಳ ಬಗ್ಗೆ ಕೇಂದ್ರದ ಗಮನ ಸೆಳೆದಿದ್ದೇನೆ. ಎರಡನೇ ಬಾರಿಗೆ ನನಗೆ ಮತನೀಡಿ ಸಂಸದರನ್ನಾಗಿ ಆಯ್ಕೆ ಮಾಡಬೇಕು ಎಂದು ವಿನಂತಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುರೇಶಗೌಡ್ರ ಪಾಟೀಲ, ಶಿವರಾಜ ಸಜ್ಜನರ, ಜಿಪಂ ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ತಾಲೂಕು ಅಧ್ಯಕ್ಷ ರಾಮಣ್ಣ ಉಕ್ಕುಂದ, ಗಿರೀಶ ತುಪ್ಪದ, ಭಾರತಿ ಜಂಬಗಿ, ಮುರುಗೇಪ್ಪ ಶೆಟ್ಟರ, ಚಂದ್ರಣ್ಣ ಮುಚ್ಚಟ್ಟಿ, ಎನ್.ಎಂ. ಈಟೇರ, ಫಕ್ಕೀರಗೌಡ್ರ ಪಾಟೀಲ, ಗಂಗಾಧರ ಮಲೆಬೆನ್ನೂರು, ಸಂಕಪ್ಪ ಮಾರನಾಳ, ಗೀತಾ ಜಂಬಗಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.