ಗದಗ

ಅಭಿವೃದ್ಧಿಗೆ ಕೈ ಜೋಡಿಸಿ

Published On :

ಕನ್ನಡಪ್ರಭ ವಾರ್ತೆ, ಗದಗ, ಏ. 7
ಲೋಕಸಭಾ ಚುನಾವಣೆಯಲ್ಲಿ ನನಗೆ ನೀಡಿದ್ದಕ್ಕಿಂತಲೂ ಹೆಚ್ಚಿನ ಮತಗಳನ್ನು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರಿಗೆ ನೀಡುವ ಮೂಲಕ ನನ್ನ ರಾಜಕೀಯ ಶಕ್ತಿಯನ್ನು ಮತ್ತಷ್ಟು ಬಲಗೊಳಿಸಬೇಕು. ಜತೆಗೆ ಡಿ.ಆರ್. ಪಾಟೀಲರಿಗೆ ಗೌರವ ತರಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಅವರು ಭಾನುವಾರ ಹಾವೇರಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರ ಪರ ಗದಗ-ಬೆಟಗೇರಿ ಅವಳಿ ನಗರದಲ್ಲಿ ಮನೆ-ಮನೆಯಲ್ಲಿ ಸಭೆ ನಡೆಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷೆ ರುದ್ರವ್ವ ಕೆರಕಲಮಟ್ಟಿ ಅವರ ಮನೆ, ಬಸವರಾಜ ಇರಸಪ್ಪನವರ ಮನೆ ಬಾಲಚಂದ್ರ ಭರಮಗೌಡ್ರ ಮನೆ ಹಾಗೂ ಅಶೋಕ ಬಣ್ಣದ ಅವರ ಮನೆಯಲ್ಲಿ ವಾರ್ಡ್ಗಳ ಪ್ರಮುಖರ ಸಭೆಯನ್ನು ನಡೆಸಿ ಮಾತನಾಡಿದರು.
ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಗಲಿರುಳು ದುಡಿದ ಹಾಗೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರ ಪರವೂ ಶ್ರಮಿಸಿ ಗದಗ, ರೋಣ, ಶಿರಹಟ್ಟಿ ವಿಧಾನಸಭಾ ಕ್ಷೇತ್ರದಿಂದ ಅತ್ಯಂತ ಹೆಚ್ಚು ಮತಗಳನ್ನು ನೀಡುವ ಮೂಲಕ ಅವರ ಗೆಲುವಿನ ಅಂತರವನ್ನು ಹೆಚ್ಚಿಸೋಣ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವಿದೆ. ಗದಗ-ಬೆಟಗೇರಿ ನಗರಸಭೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಗದಗ ಜಿಲ್ಲೆಯಲ್ಲಿ ಕೂಡ ಕಾಂಗ್ರೆಸ್ ಶಾಸಕರು ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಅಭ್ಯರ್ಥಿಯನ್ನೇ ಗೆಲ್ಲಿಸುವ ಮೂಲಕ ಗದಗ-ಬೆಟಗೇರಿ ಅವಳಿ ನಗರ ಹಾಗೂ ಜಿಲ್ಲೆಯನ್ನು ಮತ್ತಷ್ಟು ಸರಾಗವಾಗಿ ಅಭಿವೃದ್ಧಿ ಮಾಡಲು ಕೈ ಜೋಡಿಸುವಂತೆ ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ ಮಾತನಾಡಿದರು. ನಗರಸಭೆ ಅಧ್ಯಕ್ಷೆ ರುದ್ರವ್ವ ಕೆರಕಲಮಟ್ಟಿ, ಉಪಾಧ್ಯಕ್ಷ ಕೃಷ್ಣಾ ಪರಾಪುರ, ಬಸವರಾಜ ಇರಸಪ್ಪನವರ, ಬಾಲಚಂದ್ರ ಭರಮಗೌಡ್ರ, ಪ್ರವೀಣ ವಾರಕರ, ಮೋಹನ ಚಂದಪ್ಪನವರ, ಕೆ.ಬಿ. ತಳಗೇರಿ, ಅಶೋಕ ಮಂದಾಲಿ, ವಿಜಯ ಮುಳಗುಂದ, ನಗರಸಭೆ ಸದಸ್ಯ ಬರಕತಅಲಿ ಮುಲ್ಲಾ, ಸಿದ್ದು ಜೋಗಣ್ಣವರ, ಬಿ.ಎನ್. ದಾಯಮ್ಮನವರ, ಪ್ರಭು ಬುರಬುರೆ, ವಿಕಾಸ ಸಾಹುಕಾರ, ಗದಗ ಎಪಿಎಂಸಿ ಉಪಾಧ್ಯಕ್ಷ ಸಿದ್ದು ಪಾಟೀಲ, ಮುನ್ನಾ ರಶ್ಮಿ, ಎಚ್.ಕೆ. ಮುಲ್ಲಾ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.