ಉದಾಸಿಯಿಂದ ಕ್ಷೇತ್ರ ನಿರ್ಲಕ್ಷ್ಯ
ಹಾವೇರಿ: ಶಿವಕುಮಾರ ಉದಾಸಿ ಹಾವೇರಿ ಕ್ಷೇತ್ರವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಯಾವ ಅಭಿವೃದ್ಧಿ ಯೋಜನೆಯನ್ನು ಮಾಡಿದ್ದಾರೆಂದು ಅವರು ಜನತೆಗೆ ತಿಳಿಸಬೇಕು ಎಂದು ಮಾಜಿ ಸಂಸದ ಮಂಜುನಾಥ ಕುನ್ನೂರ ಆಗ್ರಹಿಸಿದರು.
ಹಾನಗಲ್ಲ ತಾಲೂಕಿನ ಆಡೂರು ಗ್ರಾಮದಲ್ಲಿ ಸಲೀಂ ಅಹ್ಮದ್ ಅವರ ಪರ ಸೋಮವಾರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿಯೇ ಪ್ರಥಮವಾಗಿ ಹಾವೇರಿ ಫಲಿತಾಂಶ ಪ್ರಕಟಗೊಳ್ಳಲಿದ್ದು, 2 ಲಕ್ಷಕ್ಕೂ ಅಧಿಕ ಮತಗಳಿಂದ ಸಲೀಂ ಅಹ್ಮದ್ ಅವರು ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮನುಷ್ಯನನ್ನು ಆತನ ಜಾತಿಯಿಂದ ಅಲ್ಲ, ವ್ಯಕ್ತಿತ್ವದಿಂದ ತೂಗಬೇಕು. ಜನತೆ ಈಗ ಎಚ್ಚೆತ್ತುಕೊಂಡಿದ್ದಾರೆ. ಪೊಳ್ಳುಮಾತಿಗೆ ಬಲಿಯಾಗುವುದಿಲ್ಲ ಎಂದು ಹೇಳಿದರು. ಅಭ್ಯರ್ಥಿ ಸಲೀಂ ಅಹ್ಮದ್ ಮಾತನಾಡಿ, ಅಭಿವೃದ್ಧಿಪರ, ಹಿಂದುಳಿದ, ದೀನದಲಿತರನ್ನು ಮುಖ್ಯವಾಹಿನಿಗೆ ತರುವಲ್ಲಿ ಕೇಂದ್ರದ ಯುಪಿಎ ಸರ್ಕಾರ ಹಮ್ಮಿಕೊಂಡ ಆಹಾರಭದ್ರತೆ ಕಾಯ್ದೆ, ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ, ರಾಜೀವ್ ಆವಾಸ ಯೋಜನೆ, ಗ್ರಾಮೀಣ ಆರೋಗ್ಯ ಮಿಷನ್, ಮಾಹಿತಿ ಹಕ್ಕು ಕಾಯ್ದೆ, ರಾಜ್ಯ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ ಇನ್ನಿತರ ಹತ್ತು ಹಲವಾರು ಪ್ರಮುಖ ಸಾಧನೆಗಳೇ ನಮಗೆ ಶ್ರೀರಕ್ಷೆಯಾಗಿವೆ. ಕಾಂಗ್ರೆಸ್ ನೀತಿ ಸಿದ್ಧಾಂತಗಳ ನೆಲೆಗಟ್ಟಿನಡಿಯಲ್ಲಿ ಸುಭದ್ರ ಸರ್ಕಾರ ನೀಡಬಲ್ಲ ಏಕೈಕ ಪಕ್ಷವಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಮನೋಹರ ತಹಶೀಲ್ದಾರ ಸೇರಿದಂತೆ ಹಲವರು ಮಾತನಾಡಿದರು. ಟಿ. ಈಶ್ವರ್, ರಾಜಶೇಖರ ಸಾಲಿಮಠ, ರವಿಕಾಂತ ಬೆಲ್ಲದ, ಬಿ.ಎನ್. ಹಿರೇಮಠ ಇತರರು ಇದ್ದರು. ಇದಕ್ಕೂ ಮೊದಲು ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಾಗೂ ವಸತಿ ಬಡಾವಣೆಗಳಲ್ಲಿ ಪಾದಯಾಥ್ರೆಯ ಮೂಲಕ ಮತಯಾಚಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

