ಗದಗ

ಪ್ರಮೋದ ಮುತಾಲಿಕ್ ಬಂಧನಕ್ಕೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಗದಗ, ಏ. 7
ಕೋಮ ಸೌಹಾರ್ದತೆಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಬಹಿರಂಗ ಹೇಳಿಕೆ ನೀಡಿರುವ ಶ್ರೀರಾಮ ಸೇನೆಯ ಸ್ಥಾಪಕ ಪ್ರಮೋದ ಮುತಾಲಿಕರನ್ನು ಕೂಡಲೇ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ಪದಾಧಿಕಾರಿಗಳು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಿದರು.
ಈ ದೇಶದ ಜನ ಮರೆತು ಹೋಗಿರುವ ಘಟನೆಗಳನ್ನು ಚುನಾವಣೆ ಸಂದರ್ಭದಲ್ಲಿ ಕೋಬ್ರಾ ಪೋಸ್ಟ್ ಎಂಬ ಖಾಸಗಿ ಸಂಸ್ಥೆಯ ಮೂಲಕ ವರದಿಯನ್ನು ಬಾಬ್ರಿ ಮಸೀದಿಯ ವಿಷಯವನ್ನು ಪುನರ್ ಜೀವ ನೀಡಿ ಇದನ್ನೇ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣೆಯಲ್ಲಿ ಅಭ್ಯರ್ಥಿಗಳು ಮತದಾರರನ್ನು ತಮ್ಮ ತೆಕ್ಕೆಗೆ ಸೆಳೆದುಕೊಳ್ಳಲು ಒಂದು ಕೋಮಿಗೆ ನೋವುಂಟಾಗುವ ರೀತಿಯಲ್ಲಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುತ್ತಿರುವುದು ಖಂಡನೀಯವಾಗಿದೆ.
ಈ ರೀತಿ ಹೇಳಿಕೆ ನೀಡಿರುವ ಪ್ರಮೋದ ಮುತಾಲಿಕರನ್ನು ಚುನಾವಣಾ ಆಯೋಗವು ನೀತಿ ಸಂಹಿತೆ ಕಾಯ್ದೆಯ ಅಡಿಯಲ್ಲಿ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಲು ರಾಜ್ಯಪಾಲರು ಆದೇಶ ನೀಡಬೇಕು ಹಾಗೂ ರಾಜ್ಯದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಯೋಗ್ಯ ಕಾನೂನು ಸುವ್ಯವಸ್ಥೆ      ಕಾಪಾಡಿಕೊಳ್ಳಬೇಕು ಎಂದು ಮನವಿಯ ಮೂಲಕ ಆಗ್ರಹಿಸಿದ್ದಾರೆ.
ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಅಶೋಕ ಮ್ಯಾಗೇರಿ, ಇಮ್ತಿಯಾಜ ಮಾನ್ವಿ, ಉಮಾದೇವಿ ಕಾತರಕಿ, ತಿಪ್ಪವ್ವ ಮುಟಗಾರ, ಶರೀಫ ಬಿಳೆಯಲಿ, ಯಲ್ಲಪ್ಪ ರಾಮಗಿರಿ, ಪರಶುರಾಮ ಕಾಳೆ, ಅಬುಬಕರ ಮಕಾಂದಾರ, ಅನಿಲ ಕಾಳೆ, ಪರವೀನ ಬಡಿಗೇರ, ಬಸವರಾಜ ಬಿಳೆಯಲಿ, ಇಬ್ರಾಹಿಂ ಮುಲ್ಲಾ, ದೇವಕ್ಕ ತಳವಾರ, ಯುಸೂಫ ಮಜ್ಜಗಿ, ನಾಗರಾಜ ಮುಟಗಾರ, ರವಿಕುಮಾರ ಬೆಳಮಕರ, ಸಲೀಂ ಬಳ್ಳಾರಿ ಮುಂತಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.