ಗದಗ

ಬ್ಯಾಂಕ್ ಅಧ್ಯಕ್ಷರ ಆಯ್ಕೆ

Published On :

ರಾಣಿಬೆನ್ನೂರು: ಇಲ್ಲಿನ ತಾಲೂಕು ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಿದ್ದಪ್ಪ ಕೆಂಚಪ್ಪನವರ ಅಧ್ಯಕ್ಷರಾಗಿ ಆಯ್ಕೆಯಾದರು.
ರಾಜ್ಯ ಸಹಕಾರ ಚುನಾವಣಾ ಆಯುಕ್ತರ ಆದೇಶದ ಮೇರೆಗೆ ರಾಣಿಬೆನ್ನೂರು ತಾಲೂಕಾ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಿದ್ದು, ಜೆಟ್ಟೆಪ್ಪ ಕರೆಗೌಡ್ರ ಹಾಗೂ ಸಿದ್ದಪ್ಪ ದ್ಯಾಮಪ್ಪ ಕೆಂಚಪ್ಪನವರ ಸ್ಪರ್ಧಿಸಿದ್ದರು. ಜೆಟ್ಟೆಪ್ಪ ಕರೆಗೌಡ್ರಗೆ 5 ಮತಗಳು, ಸಿದ್ದಪ್ಪ ಕೆಂಚಪ್ಪನವರ 6 ಮತ ಪಡೆದಿದ್ದರಿಂದ ಅವರನ್ನು ಅಧ್ಯಕ್ಷರೆಂದು ಘೋಷಣೆ ಮಾಡಲಾಯಿತು ಎಂದು ಚುನಾವಣಾಧಿಕಾರಿ ಎನ್.ಎಸ್. ಕುಮ್ಮೂರು ತಿಳಿಸಿದರು. ತಾಲೂಕು ಬಿಜೆಪಿ ಅಧ್ಯಕ್ಷ ಬಸವರಾಜ ಲಕ್ಷ್ಮೆಶ್ವರ, ನಗರಾಧ್ಯಕ್ಷ ವೀರಣ್ಣ ಅಂಗಡಿ, ಮಾಜಿ ಶಾಸಕ ಜಿ. ಶಿವಣ್ಣ, ಕೆ ಶಿವಲಿಂಗಪ್ಪ, ರತ್ನಾಕರ ಕುಂದಾಪುರ, ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ ಪಾಟೀಲ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಸವರಾಜ ಕೆಲಗಾರ, ಬಸಣ್ಣ ಮಾಕನೂರು, ನ್ಯಾಯವಾದಿ ಕುರುವತ್ತಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಪಾಟೀಲ, ಸಿದ್ದು ಚಿಕ್ಕಬಿದರಿ, ಯುವ ಅಧ್ಯಕ್ಷ ಕಿರಣ ಅಂಗಡಿ, ಮಲ್ಲಣ್ಣ ಅಂಗಡಿ ಇದ್ದರು.


ಇಂದು ಮತದಾರರ ಜಾಗೃತಿಗೆ ರಂಗೋಲಿ ಸ್ಪರ್ಧೆ


ಹಾವೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ವ್ಯವಸ್ಥಿತ ಮತದಾರ ಶಿಕ್ಷಣ ಮತ್ತು ಭಾಗವಯಿಸುವಿಕೆ (ಸ್ವೀಪ್) ಕಾರ್ಯಕ್ರಮದಲ್ಲಿ ಮತದಾರರ ಜಾಗೃತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಏ. 8ರಂದು ಬೆಳಗ್ಗೆ 9 ಗಂಟೆಗೆ ನಗರದ ಜೆ.ಎಚ್. ಪಟೇಲ್ ವೃತ್ತದಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕೆ.ಬಿ. ಆಂಜನಪ್ಪ ಅವರು ಪ್ರಶಸ್ತಿ ಪತ್ರಗಳನ್ನು ವಿತರಿಸುವರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ವಿಜಯಕುಮಾರ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.