ಕೊಳಗೇರಿ ಅಭಿವೃದ್ಧಿಗೆ ಪಾಲು ನಿಗದಿಯಾಗಲಿ
ಗದಗ: ಸರ್ಕಾರ ಕೊಳಗೇರಿಗಳ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಪ್ರತ್ಯೇಕ ಪಾಲು ನಿಗದಿಗೊಳಿಸಬೇಕು ಎಂದು ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಅಶೋಕ ಮ್ಯಾಗೇರಿ ಹೇಳಿದರು.
ಅವರು ಶನಿವಾರ ನಗರದಲ್ಲಿ ಗದಗ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣ ಸಮಿತಿ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಕೊಳಚೆ ಪ್ರದೇಶಗಳ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತಿವೆ. ಆದರೆ, ಅನುದಾನ ಅವ್ಯವಹಾರದಿಂದ ಬಡ ಕುಟುಂಬಗಳು ವಾಸಿಸುತ್ತಿರುವ ಸ್ಲಂ ಪ್ರದೇಶಗಳು ಅಭಿವೃದ್ಧಿಯಾಗದೇ ಸ್ಲಂ ನಿವಾಸಿಗಳು ಸರ್ಕಾರದ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಸಮಿತಿಯ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ ಮಾನ್ವಿ ಮಾತನಾಡಿ, ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು ತಮ್ಮ ಮತಕ್ಷೇತ್ರದ ಅಭಿವೃದ್ಧಿ ಅನುದಾನವನ್ನು ಸರಿಯಾಗಿ ಬಳಕೆ ಮಾಡದೇ, ಇದರಲ್ಲಿ ಸ್ಲಂ ಪ್ರದೇಶಗಳ ಅಭಿವೃದ್ಧಿಗೆ ಯಾವುದೇ ಅನುದಾನ ಉಪಯೋಗಿಸದೇ ಸ್ಲಂ ಜನರ ವಿರೋಧಿ ನೀತಿಯನ್ನು ಅನುಸರಿಸಿದ್ದಾರೆ ಎಂದರು. ಅಶೋಕ ಕುಡತಿನ್ನಿ, ಉಮಾದೇವಿ ಕಾತರಕಿ, ತಿಪ್ಪವ್ವ ಮುಟಗಾರ, ಶರೀಫ ಬಿಳೆಯಲಿ, ಯಲ್ಲಪ್ಪ ರಾಮಗಿರಿ, ಅಶೋಕ ಕುಸಬಿ, ಆರತಿ, ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

