ಗದಗ

ಅಹ್ಮದ್‌ಗೆ ಮತ ನೀಡಿ

Published On :

ಗದಗ: ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಸಾಮಾಜಿಕ ನ್ಯಾಯದೊಂದಿಗೆ ಆರ್ಥಿಕವಾಗಿ ಹಿಂದುಳಿದ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಬದ್ಧವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ ಅವರಿಗೆ ತಮ್ಮ ಅಮೂಲ್ಯವಾದ ಮತ ನೀಡಿ ಪ್ರಚಂಡ ಬಹುಮತದಿಂದ ಆರಿಸಿ ತರಬೇಕೆಂದು ನಗರಸಭೆ ಅಧ್ಯಕ್ಷೆ ರುದ್ರವ್ವ ಕೆರಕಲಮಟ್ಟಿ ಹೇಳಿದರು.
ಅವರು ಬುಧವಾರ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರವಾಗಿ ನಗರದ 20ನೇ ವಾರ್ಡಿನ ವಿಬೂತಿ ಓಣಿ, ಜನತಾ ಕಾಲನಿ, ಖಾನ್ ತೋಟ, ನಾಗಲಿಂಗ ನಗರಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ನಂತರ ನಡೆದ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು. ಸಮಾಜದ ಎಲ್ಲ ವರ್ಗಗಳ ಏಳ್ಗೆಗಾಗಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 10 ವರ್ಷಗಳಲ್ಲಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಹತ್ತು ತಿಂಗಳಲ್ಲಿ ಬಡವರಿಗಾಗಿ, ದೀನದಲಿತರಿಗಾಗಿ ಹಲವಾರು ಹೊಸ ಯೋಜನೆಗಳನ್ನು ಕಾಂಗ್ರೆಸ್ ಜಾರಿಗೆ ತಂದಿದೆ ಎಂದರು.
ನಗರಸಭೆ ಮಾಜಿ ಸದಸ್ಯ ದಾವಲಸಾಬ ಈಟಿ, ತಯ್ಯಬ ಕುನ್ನಿಬಾವಿ, ಶಖೀಲ ಡಂಬಳ, ಕೆ.ಪಿ. ಯಲಿಸೂರಂದ, ಶಿವಪ್ಪ ಕಮತರ, ಮಾಬುಬಿ ಕಟ್ಟಿಮನಿ, ಪರಪ್ಪ ಕಮತರ, ಪ್ರಕಾಶ ಪಲ್ಲೇದ, ಮಂಜು ಮಂದಾಲಿ, ಈಶಣ್ಣ ಬಾವಿಕಟ್ಟಿ, ಸುಶೀಲಾ ಕಮತರ, ಸಾವಿತ್ರಮ್ಮ ಕಮತರ, ಜನ್ನತಬಿ ಯಲಿಸೂರುಂದ, ರೇಣವ್ವ ಹಳ್ಳೂರ, ಸಾವಿತ್ರವ್ವ ಗದಗಿನ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.