ಗದಗ

ಸಿಎಂ ಆಗಿದ್ದು ಗೌಡರಿಗೆ ಅಸಹನೆ

Published On :

 ಕನ್ನಡಪ್ರಭ ವಾರ್ತೆ, ಗದಗ, ಏ. 11
ನಾನು ಮುಖ್ಯಮಂತ್ರಿ ಆಗಿದ್ದನ್ನೇ ದೇವೇಗೌಡರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಅವರು ಸಿದ್ದರಾಮಯ್ಯಗೆ ಅಧಿಕಾರದ ಅಹಂ ಬಂದಿದೆ ಎಂದು ಟೀಕೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಅವರು ಶುಕ್ರವಾರ ಗದಗ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಈ ಸಿದ್ದರಾಮಯ್ಯ ಅಧಿಕಾರ ಬಂದಾಗಲೂ ಹೀಗೆಯೇ ಇದ್ದಾನೆ. ಅಧಿಕಾರ ಇಲ್ಲದಾಗಲೂ ಹೀಗೆಯೇ ಇದ್ದೇನೆ. ನಾನು ಸ್ವಾಭಿಮಾನಿ, ದೇವೇಗೌಡರಿಗೆ ಅವರು ಹೇಳಿದ್ದನ್ನು ಕೇಳವವರು ಮಾತ್ರ ಬೇಕು. ಅವರಿಗೆ ಸ್ವಾಭಿಮಾನಿಗಳನ್ನು ಕಂಡರೆ ಆಗುವುದಿಲ್ಲ. ಸಿದ್ದರಾಮಯ್ಯ ಹೋರಾಟದ ಮೂಲಕ ಬದುಕು ಕಟ್ಟಿಕೊಂಡ ವ್ಯಕ್ತಿ. ಅದಕ್ಕಾಗಿ ರಾಜ್ಯದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಜನತೆ ಆಶೀರ್ವಾದಿಂದ ನಾನು ಸಿಎಂ ಆಗಿದ್ದೇನೆ. ಇದನ್ನು ದೇವೇಗೌಡರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ನನ್ನ ಬಗ್ಗೆ ಕ್ಷುಲ್ಲಕ ಟೀಕೆ ಮಾಡುತ್ತಿದ್ದಾರೆ.
ಈಗಲೂ ಜೆಡಿಎಸ್ ಹಾಗೂ ಬಿಜೆಪಿ ಮುಖಂಡರಿಗೆ ಹೇಳಲು ಬಯಸುತ್ತೇನೆ. ಈ ಸಿದ್ದರಾಮಯ್ಯ ಯಾರಿಗೂ ಸೊಪ್ಪು ಹಾಕುವ ಮನಸ್ಥಿತಿಯವನಲ್ಲ. ಅಧಿಕಾರದ ಮದ ಬಂದಿದೆ ಎನ್ನುವ ಅವರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ದೇವೇಗೌಡರಿಗೆ ಗುಲಾಮಗಿರಿ ಮಾಡುವವರು ಬೇಕು ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.