ಗದಗ

ಬಡವರಿಗೆ ಅಕ್ಕಿ: ಬಿಜೆಪಿಗೆ ಅಸಮಾಧಾನ

Published On :

ಗದಗ: ಬಿಜೆಪಿ ಬಡವರ ವಿರೋಧಿ. ಸಿದ್ದರಾಮಯ್ಯ ಬಡವರಿಗೆ ರು. 1ಗೆ ಕೆಜಿ ಅಕ್ಕಿ ಕೊಟ್ಟು ಸೋಮಾರಿಗಳನ್ನಾಗಿ ಮಾಡಿದ್ದಾನೆ ಎಂದು ಬಿಜೆಪಿ ನಾಯಕರು ಹೇಳುವ ಮೂಲಕ ಬಡವರ ವಿರೋಧಿ ಎಂದು ಸಾಬೀತು ಮಾಡಿದ್ದಾರೆ. ಅದಕ್ಕಾಗಿ ರಾಜ್ಯದ 1.40 ಕೋಟಿ ಬಡ ಕುಟುಂಬದವರು ತಮ್ಮ ವಿರೋಧಿಗಳಿಗೆ ಮತ ಹಾಕಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಪ್ರಚಾರ ಕಾರ್ಯಕ್ರಮದಲ್ಲಿ ಶುಕ್ರವಾರ ಪಾಲ್ಗೊಂಡ ಅವರು, ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಅವರ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಏನು ಹೊಸದಿಲ್ಲ. ಬಡವರ ಅಭಿವೃದ್ಧಿಗೆ ಒಂದೇ ಒಂದು ಯೋಜನೆ ಇಲ್ಲ. ಇಂತಹ ಜನರಿಂದ ನೀವು ಮತ್ತಷ್ಟು ತೊಂದರೆ ಅನುಭವಿಸುತ್ತೀರಿ. ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿರುವ ಕಾಂಗ್ರೆಸ್‌ನ್ನು ಬೆಂಬಲಿಸಿ ಎಂದರು. ಹಸಿವು ಮುಕ್ತ ಕರ್ನಾಟಕ ನಿರ್ಮಾಣ ನನ್ನ ಗುರಿ. ನಾನು ಚಿಕ್ಕವನಿದ್ದಾಗ ಶ್ರೀಮಂತರ ಮನೆ ಮುಂದೆ ತುತ್ತು ಅನ್ನಕ್ಕಾಗಿ ಕಾಯುತ್ತಾ ನಿಂತಿರುವ ಬಡವರನ್ನು ಕಂಡಿದ್ದೇನೆ.
ಅದಕ್ಕಾಗಿಯೇ ಎಷ್ಟೇ ಹಣ ಖರ್ಚಾದರೂ ರು. 1ಗೆ ಕೆಜಿ ಅಕ್ಕಿ ಕೊಡುತ್ತಿದ್ದೇನೆ. ಇದನ್ನು ಸಹಿಸದವರು ಏನೇನೋ ಮಾತನಾಡುತ್ತಿದ್ದಾರೆ. ಅದಕ್ಕೆಲ್ಲ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.