ನಾಳೆ ಡಾ. ಅಂಬೇಡ್ಕರ್ ಜನ್ಮ ದಿನಾಚರಣೆ
ಗದಗ: ಬೆಟಗೇರಿ ನಗರದ ಮಹಾರಾಣಾ ಪ್ರತಾಪಸಿಂಹ ಶಿಕ್ಷಣ ಸಂಸ್ಥೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಏ. 14ರಂದು ಬೆಳಗ್ಗೆ 9.30ಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಅರ್. ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಅದರ ಅಂಗವಾಗಿ ಭಾವಚಿತ್ರ ಪೂಜೆ, 2013-14ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾದ ಶಿಷ್ಯವೇತನದ ಚೆಕ್ ವಿತರಣೆ, 2013-14ನೇ ಸಾಲಿನ ಫಲಿತಾಂಶ ಪ್ರಕಟಣೆ, 2014-15ನೇ ಸಾಲಿಗೆ ಪ್ರವೇಶಗಳ ಪ್ರಕ್ರಿಯೆಗಳಿಗೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಗಣೇಶಸಿಂಗ್ ಬ್ಯಾಳಿ ಚಾಲನೆ ನೀಡಲಿದ್ದಾರೆ. ಕಾರಣ ಶಿಕ್ಷಣಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಾಚಾರ್ಯ ವೈ.ಆರ್. ಹಿರೇಗೌಡರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಬೆಂಬಲಿಸಲು ಯುವ ಸೇನೆ ನಿರ್ಧಾರ
ನರಗುಂದ: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ವರ್ತೂರು ಪ್ರಕಾಶರ ಯುವ ಸೇನೆ ಬಾಗಲಕೋಟೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರಿಗೆ ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದು, ನರಗುಂದ ವಿಧಾನಸಭೆ ಮತಕ್ಷೇತ್ರದ ವರ್ತೂರ ಯುವ ಸೇನೆ ಕಾರ್ಯಕರ್ತರು ತಮ್ಮ ಮತ ಬಿಜೆಪಿ ಅಭ್ಯರ್ಥಿಗೆ ಹಾಕಬೇಕೆಂದು ತಾಲೂಕು ವರ್ತೂರು ಯುವ ಸೇನೆ ಅಧ್ಯಕ್ಷ ಅಖಂಡಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ಸಿನ ಸಾಧನೆ ಶೂನ್ಯ: ಮಾಳಶೆಟ್ಟಿ
ಗದಗ: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಕಳೆದ 10 ವರ್ಷಗಳ ಸಾಧನೆ ಶೂನ್ಯ ಎಂದು ನಮೋ ಬ್ರಿಗೇಡ್ನ ಜಿಲ್ಲಾ ಸಂಚಾಲಕ ಮೋಹನ ಮಾಳಶೆಟ್ಟಿ ಹೇಳಿದರು. ಅವರು ಈಚೆಗೆ ನಗರದ 19ನೇ ವಾರ್ಡ್ನಲ್ಲಿ ಹಾವೇರಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರ ಮನೆ ಮನೆಗೆ ಭೇಟಿ ನೀಡಿ ಮತ ಯಾಚನೆ ಮಾಡಿ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಯಾಗಬೇಕಾದಲ್ಲಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಭ್ರಷ್ಟಾಚಾರ ರಹಿತ ಉತ್ತಮ ಆಡಳಿತ ನೀಡಲು ಸಹಕಾರಿಯಾಗಲಿದ್ದು, ಪ್ರತಿಯೊಬ್ಬರೂ ಬಿಜೆಪಿಗೆ ಬೆಂಬಲಿಸುವಂತೆ ಮನವಿ ಮಾಡಿದರು. ಛಲ್ಲಿಗನರಾಜ ಪುರೋಹಿತ, ಗಂಗಾಧರ ಹಬೀಬ, ವಿನಾಯಕ ಹಬೀಬ, ಸುಧೀರ್ ಕಾಟಿಗರ, ನಗರಸಭೆ ಸದಸ್ಯೆ ಪಾರ್ವತಿ ಪತ್ತಾರ, ಕಿಶನ್ ಮೆರವಾಡೆ, ಕಿರಣ್ ಕಲಾಲ, ಪವನ್ ಬಾಕಳೆ, ಸುರೇಶ ಹರ್ತಿ, ಮಲ್ಲಿಕಾರ್ಜುನ ಹೊಂಬಳ, ಕೊಟ್ರೇಶ್ ಹರ್ತಿ, ಬಸವರಾಜ ಹಡಪದ, ರವಿ ಕಲಾಲ, ಗುರು ಭಾಂಡಗೆ ಮುಂತಾದವರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

