ಗದಗ

ಕಾಂಗ್ರೆಸ್‌ಗೆ ಭವಿಷ್ಯವಿಲ್ಲ: ಸಿ.ಸಿ. ಪಾಟೀಲ

Published On :

ರೋಣ: ದೇಶದಲ್ಲಿ ಕಳಪೆ ಮಟ್ಟದ ಆಡಳಿತ ನಡೆಸಿ ಜನತೆಯ ಕೆಂಗಣ್ಣಿಗೆ ಗುರಿಯಾದ ಕಾಂಗ್ರೆಸ್‌ಗೆ ಇನ್ನು ಮುಂದೆ ಭವಿಷ್ಯವಿಲ್ಲ. ಇದಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನತೆಯೇ ಪಾಠ ಕಲಿಸಲಿದ್ದಾರೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ ಹೇಳಿದರು.
ಅವರು ಭಾನುವಾರ ತಾಲೂಕಿನ ಮಲ್ಲಾಪುರ ಗ್ರಾಮದ ಬಜಾರ ಬಯಲು ಜಾಗೆಯಲ್ಲಿ ಏರ್ಪಡಿಸಿದ್ದ ಭಾರತ ಗೆಲ್ಲಿಸಿ ಪ್ರಚಾರ ಸಭೆಯನ್ನು ಉದ್ಘಾಟಿಸಿ, ಬಳಿಕ ಬಾಗಲಕೋಟೆ ಲೋಕಸಭೆ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡ್ರ ಪರ ಮತ ಯಾಚನೆ ಮಾಡಿ ಮಾತನಾಡಿದರು.
ಬಾಗಲಕೋಟೆ ಲೋಕಸಭೆ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡ್ರ ಮಾತನಾಡಿ, ಕಾಂಗ್ರೆಸ್ ದೇಶದಲ್ಲಿ ಬಡವರು, ಮೇಲ್ವರ್ಗದವರು ಎಂಬ ದೊಡ್ಡ ಕಂದಕವನ್ನೇ ಹುಟ್ಟು ಹಾಕಿದೆ. ಕಳೆದ 10 ವರ್ಷಗಳಿಂದ ನಿರೀಕ್ಷಿತ ಅಭಿವೃದ್ಧಿಯಾಗಿಲ್ಲ. ದೇಶದ ಸುಭದ್ರತೆಗೆ, ಏಕತೆಗೆ ಮತ್ತು ಸಮಗ್ರ ಅಭಿವೃದ್ಧಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಅವಶ್ಯವಾಗಿದೆ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ದಂಡಿನ ಮಾತನಾಡಿದರು. ಇದೇ ವೇಳೆ ವಿವಿಧ ಪಕ್ಷ ತೊರೆದು ಅನೇಕರು ಬಿಜೆಪಿ ಸೇರ್ಪಡೆಕೊಂಡರು. ವೇದಿಕೆಯ ಮೇಲೆ ಗ್ರಾಪಂ ಅಧ್ಯಕ್ಷೆ ಚನ್ನಮ್ಮ ಯಂಡಿಗೇರಿ, ಸದಸ್ಯರಾದ ಜಗದೀಶ ಗಾರವಾಡಿ, ಬಸವಣ್ಣೆವ್ವ ಚಳಗೇರಿ, ದೇವಕ್ಕ ವಾಲ್ಮೀಕಿ, ಜಿಲ್ಲಾ ಎಸ್‌ಟಿ ಮೋರ್ಚಾ ಅಧ್ಯಕ್ಷ ಬಸವಂತಪ್ಪ ತಳವಾರ, ಮುಖಂಡರಾದ ಅಶೋಕ ಕುಲಕರ್ಣಿ, ವಿರೂಪಾಕ್ಷಗೌಡ ಪಾಟೀಲ, ವೀರಯ್ಯ ಹಿರೇಮಠ, ಎಸ್.ಬಿ. ಹುಲಗೂರ, ಮುದಿಯಪ್ಪ ಕರಡಿ, ಬಸವರಾಜ ಚಲವಾದಿ ಸೇರಿದಂತೆ ಮುಂತಾದವರು ಇದ್ದರು. ಮಹಾಂತೇಶ ನರಿಯವರ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.