ಗದಗ

ಮೋದಿ ಪ್ರಧಾನಿಯಾದರೆ ದೇಶಕ್ಕೆ ಉತ್ತಮ ಭವಿಷ್ಯ

Published On :

ಶಿರಹಟ್ಟಿ: ದಕ್ಷ ಆಡಳಿತಗಾರ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡುವುದು ದೇಶದ ಭವಿಷ್ಯದ ದೃಷ್ಟಿಯಿಂದ ಸೂಕ್ತ. ಅದಕ್ಕಾಗಿ ಬಿಜೆಪಿಗೆ ಈ ಬಾರಿ ಮತ ನೀಡಿ ಗೆಲ್ಲಿಸುವಂತೆ ಹಾವೇರಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಶಿವಕುಮಾರ ಉದಾಸಿ ಹೇಳಿದರು. ಸೋಮವಾರ ಪಟ್ಟಣದಲ್ಲಿಯ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರೋಡ್ ಶೋ ನಡೆಸಿ ನಂತರ ಮಾತನಾಡಿದರು. ದೇಶದ ರಕ್ಷಣೆ ಹಾಗೂ ಭ್ರಷ್ಟಾಚಾರ ಮುಕ್ತರಾಷ್ಟ್ರ ನಿರ್ಮಾಣಕ್ಕಾಗಿ ಕೈ ಜೋಡಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು. ದೇಶದ ಎಲ್ಲ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬಲ್ಲ ಚುನಾವಣೆ ಇದಾಗಿದೆ. ಹೆಚ್ಚು ಆಲೋಚನೆ ಮಾಡಿ ಅಭಿವೃದ್ಧಿಪರ ಚಿಂತನೆಯ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು. ಮಾಜಿ ಶಾಸಕ ರಾಮಣ್ಣ ಲಮಾಣಿ, ಪಪಂ ಅಧ್ಯಕ್ಷ ನಾಗರಾಜ ಲಕ್ಕುಂಡಿ, ವಿ.ವಿ. ಕಪ್ಪತ್ತನವರ, ರಾಮಣ್ಣ ಡಂಬಳ, ಸಣ್ಣವೀರಪ್ಪ ಹಳ್ಳೆಪ್ಪನವರ, ಚಂದ್ರಕಾಂತ ನೂರಶೆಟ್ಟರ, ಜೆ.ಆರ್. ಕುಲಕರ್ಣಿ, ಗೂಳಪ್ಪ ಕರಿಗಾರ, ಯಲ್ಲಪ್ಪ ಇಂಗಳಗಿ, ರಿಯಾಜಅಹ್ಮದ ಫಣಿಬಂಧ, ಬೀರಪ್ಪ ಸ್ವಾಮಿ, ಶಶಿಧರ ರಾನಡೆ, ಅನಿಲ ಮಾನೆ, ಮಹಾಂತೇಶ ಹಳ್ಳೆಪ್ಪನವರ, ಬಸವರಾಜ ಚಿಕ್ಕತೋಟದ, ಸುರೇಶ ಹವಳದ, ಬಸವರಾಜ ಹರ್ತಿ, ರಾಮಣ್ಣ ಕಂಬಳಿ, ನೀಲಮ್ಮ ನಾರ್ಶಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.