ಸಿದ್ದು ಅಭಿವೃದ್ಧಿ ಯಾವುದು?
ನರಗುಂದ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು 10 ತಿಂಗಳ ಗತಿಸಿದರೂ ಸಿಎಂ ಸಿದ್ದರಾಮಯ್ಯ ಏನು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆಂದು ರಾಜ್ಯದ ಜನತೆಗೆ ತಿಳಿಸಲು ಮುಂದಾಗಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಚ್. ಈಶ್ವರಪ್ಪ ಹೇಳಿದರು.
ಅವರು ಸೋಮವಾರ ಪಟ್ಟಣದ ಗಾಂಧಿ ಚೌಕ್ನಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದರು. ಸಿದ್ದರಾಮಯ್ಯ ಕುರುಬ ಸಮಾಜದವರೆಂದು ಎಲ್ಲರೂ ಕಾಂಗ್ರೆಸ್ಗೆ ಮತ ಹಾಕುವುದಿಲ್ಲ. ಯಾವುದೇ ಒಂದು ಜಾತಿಯವರು ಮತ ಹಾಕಿದರೆ ಅಭ್ಯರ್ಥಿಗಳು ಆಯ್ಕೆಯಾಗುವುದಿಲ್ಲ, ಸರ್ವ ಸಮಾದಾಯದವರು ಮತ ಹಾಕಿದರೆ ಮಾತ್ರ ಅಭ್ಯರ್ಥಿಗಳು ಆಯ್ಕೆಯಾಗುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಭದ್ರತೆ ಸಿಗುವುದಿಲ್ಲ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಎಲ್ಲ ಮುಸ್ಲಿಮರು ಕಾಂಗ್ರೆಸ್ಗೆ ಮತ ಹಾಕಿ, ಬಿಜೆಪಿ ಸೋಲಿಸಿ ಎಂದು ಹೇಳುವ ಕಾಂಗ್ರೆಸಿಗರು 60 ವರ್ಷ ಮಾಡಿದ್ದಾದರೂ ಏನು? ಎಂದರು.
ನರಗುಂದ ಶಾಸಕ ಬಿ.ಆರ್. ಯಾವಗಲ್ಲ ಅವರೇ, ನೀವು ಶಾಸಕರಾದ ಮೇಲೆ ಯಾವ ಅನುದಾನ ತಂದು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೀರಿ? ದಯವಿಟ್ಟು ಜನತೆಗೆ ತಿಳಿಸಲು ಮುಂದಾಗಿ, ಹಿಂದಿನ ಬಿಜೆಪಿ ಸರ್ಕಾರದ ಯೋಜನೆಗಳಿಗೆ ಭೂಮಿಪೂಜೆ ಮಾಡುತ್ತ, ಇದನ್ನು ತಮ್ಮ ಸರ್ಕಾರ ಮಾಡಿದ್ದು ಎಂದು ಹೇಳಲು ಹೇಗೆ ಮನಸ್ಸು ಬರುತ್ತಿದೆ? ಎಂದು ಕೇಳಿದರು. ಇದೇ ಸಂದರ್ಭದಲ್ಲಿ ವರ್ತೂರ ಪ್ರಕಾಶ ಯುವ ಸೇನೆ ಹಾಗೂ ಬಿಎಸ್ಆರ್ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರಿಗೆ ಪಕ್ಷದ ಧ್ವಜ ನೀಡಿ ಮಾಜಿ ಸಚಿವ ಸಿ.ಸಿ. ಪಾಟೀಲ ಬರಮಾಡಿಕೊಂಡರು. ಜಿಪಂ ಸದಸ್ಯ ಎಂ.ಎಸ್. ಪಾಟೀಲ, ಪುರಸಭೆ ಅಧ್ಯಕ್ಷೆ ಜ್ಯೋತಿ ಪತ್ರಿ, ಉಪಾಧ್ಯಕ್ಷ ಕಿರಣ ಮುಧೋಳ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

